ಬೆಳಗಾವಿ: 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಭವಿಷ್ಯ ನುಡಿದಿದ್ದಾರೆ. ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಎಲ್ಲ ಮೂಲ ಸೌಕರ್ಯಗಳು ನಮ್ಮಲ್ಲಿವೆ ಎಂದು ಹೇಳುವ ಮೂಲಕ ಪ್ರತ್ಯೇಕ ರಾಜ್ಯದ ಬಗ್ಗೆ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.
ಬೆಳಗಾವಿಯಲ್ಲಿ ಬಾರ್ ಅಸೋಸಿಯೇಷನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕವೂ ಎರಡು ಭಾಗವಾಗಲಿದೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರಲ್ಲೀಗ ಟ್ರಾಫಿಕ್ ಸಮಸ್ಯೆ ಸಹ ಹೆಚ್ಚಾಗಿದೆ ಎಂದರು.
ಧಾರವಾಡದಲ್ಲಿ ಹೈಕೋರ್ಟ್, ಬೆಳಗಾವಿಯಲ್ಲಿ ಸುವರ್ಣಸೌಧ ಇದೆ. ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಮೂಲಸೌಕರ್ಯ ನಮ್ಮಲ್ಲಿವೆ ಎಂದು ಉಮೇಶ್ ಕತ್ತಿ ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ 90 ವರ್ಷ ವಯಸ್ಸಾದ್ರೂ ಚುನಾವಣೆಗೆ ನಿಲ್ಲಿಸ್ತಾರೆ: ಸಚಿವ ಕತ್ತಿ ವ್ಯಂಗ್ಯ