ETV Bharat / state

ಸುವರ್ಣಸೌಧದಲ್ಲಿ ಮಾಹಿತಿ ಆಯೋಗದ ಬೆಳಗಾವಿ ಪೀಠ ಕಾರ್ಯಾರಂಭ - ಬೆಳಗಾವಿ ಪೀಠ

ಆಯೋಗದ ಬೆಳಗಾವಿ ಪೀಠದ ನ್ಯಾಯಾಲಯ ಕಲಾಪ ಜೂ. 22ರಿಂದ ಆರಂಭಗೊಳ್ಳಲಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತೆ ಗೀತಾ ಬಿ.ವಿ. ಹೇಳಿದ್ದಾರೆ.

suvarna soudha
suvarna soudha
author img

By

Published : Jun 19, 2020, 3:15 PM IST

ಬೆಳಗಾವಿ: ವಿವಿಧ ಇಲಾಖೆಗಳ ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕು ಎಂಬ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಮತ್ತು ಸರ್ಕಾರದ ಆಶಯದಂತೆ ಇಲ್ಲಿನ ಸುವರ್ಣಸೌಧದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠವು ಕಾರ್ಯಾರಂಭ ಮಾಡಿದೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತೆ ಗೀತಾ ಬಿ.ವಿ. ಅವರು, ಆಯೋಗದ ಬೆಳಗಾವಿ ಪೀಠದ ನ್ಯಾಯಾಲಯ ಕಲಾಪ ಜೂ.22ರಿಂದ ಆರಂಭಗೊಳ್ಳಲಿದೆ ಎಂದು ಪ್ರಕಟಿಸಿದರು.

office shifted to suvarna soudha in belgavi
ಕರ್ನಾಟಕ ಮಾಹಿತಿ ಆಯೋಗದ ಆಯುಕ್ತೆ ಗೀತಾ ಬಿ.ವಿ

ಆಯೋಗದ ಬೆಳಗಾವಿ ಪೀಠವು ಮಾರ್ಚ್ 3ರಂದು ಕಾರ್ಯಾರಂಭಿಸಬೇಕಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ವಿಳಂಬವಾಯಿತು. ಸರ್ಕಾರ ಮತ್ತು ಉತ್ತರ ಕರ್ನಾಟಕದ ಜನರ ಆಶೋತ್ತರದಂತೆ ಸುವರ್ಣ ವಿಧಾನಸೌಧದಲ್ಲಿ ಕಾರ್ಯ ಕಲಾಪ ಆರಂಭಿಸಲಾಗುತ್ತಿದೆ. ಈ ಭಾಗದ ಜನರ ಬಹುದಿನಗಳ ಆಶಯ ಇದೀಗ ಈಡೇರಿದಂತಾಗಿದೆ. ಪೀಠದ ಕಾರ್ಯನಿರ್ವಹಣೆಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಆಯುಕ್ತರು ಕೃತಜ್ಞತೆ ಸಲ್ಲಿಸಿದರು.

ಪೀಠಕ್ಕೆ ಏಳು ಜಿಲ್ಲೆಯ ವ್ಯಾಪ್ತಿ:

ಮಾಹಿತಿ ಆಯೋಗದ ಬೆಳಗಾವಿ ಪೀಠದ ವ್ಯಾಪ್ತಿಯಲ್ಲಿ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳು ಬರಲಿದ್ದು, ಪೀಠದ ವ್ಯಾಪ್ತಿಯಲ್ಲಿ ಒಟ್ಟಾರೆ ನಾಲ್ಕು ಸಾವಿರ ಪ್ರಕರಣಗಳು ಬಾಕಿ ಉಳಿದಿರುತ್ತವೆ ಎಂದು ಆಯುಕ್ತರಾದ ಗೀತಾ ಬಿ‌.ವಿ. ತಿಳಿಸಿದರು. ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಕರಣಗಳನ್ನು ಪೀಠ ನಿರ್ವಹಿಸಲಿದೆ.

ಅಧಿವೇಶನ ಸಂದರ್ಭದಲ್ಲಿ ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಾರ್ಯಕಲಾಪಗಳು ನಡೆಯುವುದಿಲ್ಲ. ಈ ಅವಧಿಯಲ್ಲಿ ಪೀಠದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಾಗಾರ ಆಯೋಜಿಸಲಾವುದು. ಕಾಯ್ದೆಯ ಬಗ್ಗೆ ಸಮರ್ಪಕ ತಿಳಿವಳಿಕೆ ನೀಡಲು ಅಧಿಕಾರಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ. ಅದೇ ರೀತಿ ಅಧಿವೇಶನ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕಲಾಪ ನಡೆಸಲಾಗುವುದು. ಇದಕ್ಕೂ ಮುಂಚೆ ಬೆಂಗಳೂರಿನಿಂದ ವಿಡಿಯೋ ಸಂವಾದದ ಮೂಲಕ ಪ್ರಕರಣ ವಿಲೇವಾರಿ ಮಾಡಲಾಗಿರುತ್ತದೆ. ಪೀಠದ ಕಾರ್ಯ ಕಲಾಪಗಳ ಸುಗಮ ನಿರ್ವಹಣೆಗೆ ಶಾಖಾಧಿಕಾರಿ ಹಾಗೂ ಅಧೀನ ಕಾರ್ಯದರ್ಶಿಗಳ ಅಗತ್ಯವಿದ್ದು, ಇವರನ್ನು ನಿಯೋಜಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.