ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳನ್ನು ಸಂಪೂರ್ಣ ಲಾಕ್ಡೌನ್ ಮಾಡಿದ್ದು, ಇಂದು ನಗರದಲ್ಲಿ ತೆರೆದ ಅಂಗಡಿಗಳನ್ನು ಖುದ್ದಾಗಿ ಅಧಿಕಾರಿಗಳು ತೆರಳಿ ಮುಚ್ಚಿಸಿದ್ದಾರೆ.
ಜಿಲ್ಲೆಯಾದ್ಯಂತ ಲಾಕ್ಡೌನ್ ಆದೇಶ ಇದ್ದರೂ ಇಂದು ಕೆಲ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ವಾಹಿವಾಟು ಆರಂಭಿಸಿದ್ದರು. ಆದರೆ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಇಂದು ಮಾರುಕಟ್ಟೆಗೆ ಆಗಮಿಸಿದ ಅಧಿಕಾರಿಗಳು ಅಂಗಡಿಗಳನ್ನು ಮುಚ್ಚಿಸಿದರು. ತಾಲೂಕಿನ ಯಡೂರ ಗ್ರಾಮದಲ್ಲಿ ಮುಂಜಾನೆಯಿಂದ ತೆರೆದಿದ್ದ ಅಂಗಡಿಗಳನ್ನು ಗ್ರಾಪಂ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಸೇರಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿ ಅಂಗಡಿಗಳನ್ನು ಮುಚ್ಚಿಸುತ್ತಿದ್ದಾರೆ.