ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಪ್ರತಿ ಗಂಟೆಗೊಮ್ಮೆ ನದಿ ನೀರಿನಒಳ ಹರಿವಿನ ಪ್ರಮಾಣವನ್ನು ಅಧಿಕಾರಿಗಳು ಗಮನಿಸುತ್ತಿದ್ದಾರೆ.
ಈಗಾಗಲೇ ಮಹಾರಾಷ್ಟ್ರದಲ್ಲಿ ಬಾರಿ ಪ್ರಮಾಣದಲ್ಲಿ ಮಳೆ ಆಗುತ್ತಿದ್ದು, ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿರುವ ಅಧಿಕಾರುಗಳು, ಕೃಷ್ಣಾ ನದಿ ನೀರಿನ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ.
ಪ್ರತಿ ಗಂಟೆಗೊಮ್ಮೆ ನದಿ ನೀರಿನ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ನೀರಿನ ಹರಿವಿನ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿದ್ದಾರೆ. ಇನ್ನು ನದಿ ನೀರಿನ ಹರಿವು ಪ್ರತಿ ಕ್ಷಣಕ್ಕೂ ಹೆಚ್ಚಳವಾಗುತ್ತಿರುವುದರಿಂದ ಬೆಳಗಾವಿ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.