ETV Bharat / state

ಐಸಿಯುನಲ್ಲಿದ್ದ ಅಜ್ಜಿಯನ್ನು ಸಬ್​ ರಿಜಿಸ್ಟರ್ ಕಚೇರಿಗೆ ಕರೆತಂದು ಆಸ್ತಿ ಪತ್ರಕ್ಕೆ ಸಹಿ: ಬೆಳಗಾವಿಯಲ್ಲೊಂದು ಘಟನೆ - ಸಹಾಯಕ ಉಪನೋಂದಣಾಧಿಕಾರಿ

ಪ್ರೈವೇಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸಿದ ಬಗ್ಗೆ ನನಗೆ ಗೊತ್ತಿಲ್ಲ. ಅರ್ಜಿ ಕೊಟ್ರೆ ನಾವು ಪ್ರೈವೇಟ್ ಅಟೆಂಡೆನ್ಸ್ ಮಾಡುತ್ತೇವೆ. ಪ್ರೈವೇಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸುವ ವೇಳೆ 1000 ರೂ‌. ಶುಲ್ಕ ಪಾವತಿಸಬೇಕಿರುತ್ತದೆ. ಆಗ ನಾವು ಓರ್ವ ಸಿಬ್ಬಂದಿ ನೇಮಿಸಿ ಕಳುಹಿಸಿಕೊಡುತ್ತೇವೆ ಎಂದು ಸಹಾಯಕ ಉಪನೋಂದಣಾಧಿಕಾರಿ ಸಚಿನ್​ ಹೇಳಿದ್ದಾರೆ.

Officials called an 80 year old woman to office to sign from hospital ICU
ಆಸ್ಪತ್ರೆ ಐಸಿಯುನಿಂದಲೇ ಸಹಿ ಮಾಡಲು 80ರ ವೃದ್ಧೆಯನ್ನು ಕಚೇರಿಗೆ ಕರೆಯಿಸಿಕೊಂಡ ಅಧಿಕಾರಿಗಳು
author img

By

Published : Oct 1, 2022, 2:03 PM IST

Updated : Oct 1, 2022, 4:09 PM IST

ಬೆಳಗಾವಿ: ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿರುವ 80 ವರ್ಷದ ವೃದ್ಧೆಯನ್ನೇ ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡು ಉಪನೋಂದಣಾಧಿಕಾರಿಗಳು ಸಹಿ ಮಾಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ 80 ವರ್ಷದ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿರೇಬಾಗೆವಾಡಿ ಗ್ರಾಮದಲ್ಲಿ ಮಹಾದೇವಿ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನಿದ್ದು, ಆ ಜಮೀನನ್ನು ಮಕ್ಕಳಾದ ವಿದ್ಯಾ ಹೊಸಮನಿ(54) ಹಾಗೂ ರವೀಂದ್ರ ಗುರಪ್ಪ ಹೊಸಮನಿ(51) ಎಂಬುವರಿಗೆ ಹಕ್ಕುಬಿಟ್ಟು ಕೊಡಲು ಅರ್ಜಿ ಸಲ್ಲಿಸಿದ್ದರು.

ಆಸ್ಪತ್ರೆ ಐಸಿಯುನಿಂದಲೇ ಸಹಿ ಮಾಡಲು 80ರ ವೃದ್ಧೆಯನ್ನು ಕಚೇರಿಗೆ ಕರೆಯಿಸಿಕೊಂಡ ಅಧಿಕಾರಿಗಳು

ಆಸ್ತಿ ಹಂಚಿಕೆ ಸಂಬಂಧ ಹಕ್ಕುಪತ್ರಕ್ಕೆ ಹೆಬ್ಬೆಟ್ಟು ಒತ್ತಿ ಸಹಿ ಹಾಕುಲು ಮಹಾದೇವಿ ಅಗಸಿಮನಿ ಬೆಳಗಾವಿಯ ಉಪನೋಂದಣಿ ಕಚೇರಿಗೆ ಆಗಮಿಸಬೇಕಿತ್ತು. ಅಜ್ಜಿ ಅನಾರೋಗ್ಯದಿಂದ ಐಸಿಯುನಲ್ಲಿದ್ದ ಕಾರಣಕ್ಕೆ ಉಪನೋಂದಣಿ ಅಧಿಕಾರಿಗೆ ಆಸ್ಪತ್ರೆಗೆ ಬರಲು ಕುಟುಂಬಸ್ಥರು ಮನವಿ ಮಾಡಿದ್ದರು. ಆದ್ರೆ ಪ್ರೈವೇಟ್​ ಅರ್ಜಿ ಸಲ್ಲಿಸದ ಹಿನ್ನೆಲೆ ಸಿಬ್ಬಂದಿಯು ಅಜ್ಜಿ ಇದ್ದ ಸ್ಥಳಕ್ಕೆ ಬಂದಿಲ್ಲವಂತೆ.

ಪ್ರೈವೇಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸಿಲ್ಲ- ಸಹಾಯಕ ಉಪನೋಂದಣಾಧಿಕಾರಿ ಸಚಿನ್: ಆಸ್ಪತ್ರೆ ಬೆಡ್ ಮೇಲೆ ವೃದ್ಧೆಯನ್ನು ಕಚೇರಿಗೆ ಕರೆಯಿಸಿ ಹಕ್ಕು ಪತ್ರಕ್ಕೆ ಸಹಿ ಹಾಕಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಹಾಯಕ ಉಪನೋಂದಣಾಧಿಕಾರಿ ಸಚಿನ್ ಮಂಡೇದ, ನಾನು ನಿನ್ನೆ ಕಚೇರಿಯಲ್ಲಿ ಇದ್ದಿರಲಿಲ್ಲ. ಸಬ್ ರಿಜಿಸ್ಟ್ರಾರ್ ಇದ್ದರು. ಅವರಿಂದು ರಜೆ ಮೇಲೆ ತೆರಳಿದ್ದಾರೆ. ಆಪರೇಟರ್ ಹತ್ತಿರ ಕೇಳಿದಾಗ ನನಗೆ ಈ ಬಗ್ಗೆ ಗೊತ್ತಾಗಿದ್ದು, ಹಕ್ಕುಬಿಟ್ಟ ಪತ್ರ ಮಾಡಿಸಲು ಅಜ್ಜಿಯನ್ನು ಸ್ಟ್ರೆಚರ್ ಮೇಲೆ ಕರೆದುಕೊಂಡು ಬಂದಿದ್ದರು ಎಂದು ತಿಳಿಸಿದ್ದಾರೆ.

ಪ್ರೈವೆಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸಿದ ಬಗ್ಗೆ ನನಗೆ ಗೊತ್ತಿಲ್ಲ. ಅರ್ಜಿ ಕೊಟ್ರೆ ನಾವು ಪ್ರೈವೇಟ್ ಅಟೆಂಡೆನ್ಸ್ ಮಾಡುತ್ತೇವೆ. ಪ್ರೈವೇಟ್ ಅಟೆಂಡೆನ್ಸ್‌ಗೆ ಅರ್ಜಿ ಸಲ್ಲಿಸುವ ವೇಳೆ 1000 ರೂ‌. ಶುಲ್ಕ ಪಾವತಿಸಬೇಕಿರುತ್ತದೆ. ಆಗ ನಾವು ಓರ್ವ ಸಿಬ್ಬಂದಿ ನೇಮಿಸಿ ಕಳುಹಿಸಿ ಕೊಡುತ್ತೇವೆ. ಹಣ ನೀಡದ ಹಿನ್ನೆಲೆ ಕಚೇರಿಗೆ ಕರೆದುಕೊಂಡು ಬರುವಂತಾಯ್ತು ಎಂಬ ಆರೋಪ ವಿಚಾರಕ್ಕೆ, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಹಾಯಕ ಉಪನೋಂದಣಾಧಿಕಾರಿ ಸಚಿನ್ ಮಂಡೇದ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ.. ಲಂಚ ಪಡೆಯುತ್ತಿದ್ದ ವೇಳೆ ರೆಡ್​ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

Last Updated : Oct 1, 2022, 4:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.