ಬೆಳಗಾವಿ: ನೆರೆಯ ಮಹಾರಾಷ್ಟ್ರ ನಂಟು ಜಿಲ್ಲೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಮುಂಬೈನಿಂದ ಮರಳಿದ್ದ ಯುವತಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 312ಕ್ಕೆ ಏರಿಕೆಯಾಗಿದೆ.
ಮುಂಬೈನಿಂದ ಜಿಲ್ಲೆಗೆ ಮರಳಿದ್ದ 20 ವರ್ಷದ ಯುವತಿಯ ಗಂಟಲು ದ್ರವವನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಯುವತಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಏಳು ಮಂದಿ ಗುಣಮುಖ:
ಇನ್ನೊಂದೆಡೆ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಏಳು ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ವೃದ್ಧೆ ಮೃತಪಟ್ಟಿದ್ದು, ಒಟ್ಟು 289 ಜನ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 22 ಕೊರೊನಾ ಪಾಸಿಟಿವ್ ಆ್ಯಕ್ಟೀವ್ ಕೇಸ್‌ಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.