ಬೆಳಗಾವಿ: ಮಹಾಮಾರಿ ಕೊರೊನಾ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಯನ್ನು ಬಲಿ ಪಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ 49 ವರ್ಷ ವಯಸ್ಸಿನ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾನೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಕಳೆದ ವಾರವೇ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಜುಲೈ 10ರಂದು ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಿ ನಾಲ್ಕು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 13ಕ್ಕೇರಿಕೆಯಾಗಿದೆ.