ಅಥಣಿ: ಪಟ್ಟಣದ ಶಾಂತಿ ನಗರ ನಿವಾಸಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು ವಾಸವಿದ್ದ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ.
ಈತ ಅನಾರೋಗ್ಯದಿಂದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಮೀರಜ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಈತನಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಆಗ, ಮಹಾರಾಷ್ಟ್ರದ ಅಧಿಕಾರಿಗಳು ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದರು.
ಸೋಂಕಿತನ ಮನೆ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುವುದು ಎಂದು ತಾಲೂಕು ವೈದ್ಯಾಧಿಕಾರಿ ಮುತ್ತಪ್ಪ ಕೊಪ್ಪದ ಈಟಿವಿ ಭಾರತಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು.