ಚಿಕ್ಕೋಡಿ : ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನುಳಿದ 11 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಆಟೋ ಪ್ರಯಾಣಿಕ ವಿನೋದ ಕಾಂಬಳೆ (20) ಮೃತರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಒಂದೇ ದಿನ 2 ಕಡೆ ಹಲ್ಲೆ ಆರೋಪ: ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ ಕೆಲ ಸಂಘಟನೆ ಕಾರ್ಯಕರ್ತರು
ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ: ಉಗಾರ ಗ್ರಾಮದಿಂದ ಐನಾಪುರ ಗ್ರಾಮಕ್ಕೆ ತೆರಳುತಿದ್ದ ಪ್ಯಾಸೆಂಜರ್ ಆಟೋದಲ್ಲಿ ಒಟ್ಟು 12 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಡಿವೈಎಸ್‌ಪಿ ಶ್ರೀಪಾದ ಜಲ್ದೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಯುವತಿ ಕುತ್ತಿಗೆಯಿಂದ ಸರ ಕದಿಯುವಲ್ಲಿ ವಿಫಲ.. ಮಾರಕಾಸ್ತ್ರ ತೋರಿಸಿ ಪರಾರಿಯಾದ ಸರಗಳ್ಳ- ವಿಡಿಯೋದಲ್ಲಿ ಸೆರೆ
ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ : ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಂಡ್ಯದ ಮದ್ದೂರು ಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ (ಜೂನ್ 25-2023) ನಡೆದಿತ್ತು. ಮೃತರನ್ನು ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: Mangaluru Crime: ಸರ, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಪೊಲೀಸ್ ಬಲೆಗೆ.. 14 ಲಕ್ಷ ಮೌಲ್ಯದ ಚಿನ್ನ, ಬೈಕ್ ವಶ
ಮೈಸೂರಿಗೆ ತೆರಳುವ ವೇಳೆ ಅಪಘಾತ: ಬೆಂಗಳೂರಿನಿಂದ ಮೈಸೂರಿಗೆ ಮುಂಜಾನೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಮಣಿ ಕೋಲಾರ ಜಿಲ್ಲೆಯವರು. ಮತ್ತೊಬ್ಬ ಯುವಕ ಜನಾರ್ಧನ್ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ನಿವಾಸಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಮೈಸೂರಿಗೆ ತೆರಳುವ ವೇಳೆ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂಬುದಾಗಿ ಮಾಹಿತಿ ಲಭಿಸಿತ್ತು.
ಇದನ್ನೂ ಓದಿ: Bengaluru crime: ಮಾತನಾಡುವ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ ಅರೋಪ.. ಉದ್ಯಮಿಯ ಪುತ್ರ ಪೊಲೀಸರ ವಶಕ್ಕೆ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿತ್ತು. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
ಕೂದಲೆಳೆ ಅಂತರದಲ್ಲಿ ಪಾರಾಗಿದ್ದ ಚುನಾವಣಾ ಸಿಬ್ಬಂದಿ: ಇತ್ತೀಚೆಗೆ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ಮದ್ದೂರು ತಾಲೂಕಿನ ನಿಡಘಟ್ಟ ಚೆಕ್ ಪೋಸ್ಟ್ ಬಳಿ ರಸ್ತೆ ಅಪಘಾತ ನಡೆದಿತ್ತು. ಚುನಾವಣಾ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. ಇಬ್ಬರು ಕಾರು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದರು.
ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರು ಸಾವು