ETV Bharat / state

ಕೆಎಂಎಫ್​ನಿಂದ ಶೀಘ್ರವೇ ಒಂದು ಸಾವಿರ ಹುದ್ದೆಗಳ ಭರ್ತಿ; ಬಾಲಚಂದ್ರ ಜಾರಕಿಹೊಳಿ - Balagavi latest news

ಕೆಎಂಎಫ್ ವತಿಯಿಂದ ರಾಜ್ಯದ ಎಲ್ಲ 12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ‌ ಭದ್ರತೆ ಒದಗಿಸಲಾಗುವುದು. ಇದರಿಂದ ಹೈನುಗಾರರಿಗೆ ಅನುಕೂಲವಾಗಲಿದೆ. ಸದ್ಯಕ್ಕೆ 15 ಸಾವಿರ ಕೋಟಿ ವಾರ್ಷಿಕ ವಹಿವಾಟನ್ನು ಮುಂದಿನ ನಾಲ್ಕು ವರ್ಷಗಳಲ್ಲಿ 25 ಸಾವಿರ ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ..

One thousand vacancies will be filled by KMF soon: Balachandra Jarkiholi
ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ
author img

By

Published : Nov 18, 2020, 6:20 PM IST

ಬೆಳಗಾವಿ: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದಿಂದ ಶೀಘ್ರವೇ ರಾಜ್ಯಾದ್ಯಂತ ಒಂದು ಸಾವಿರ ಹುದ್ದೆ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ಹೇಳಿದರು.

One thousand vacancies will be filled by KMF soon: Balachandra Jarkiholi
ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಅಮುಲ್ ಹಾಗೂ ಕೆಎಂಎಫ್ ಗಟ್ಟಿಯಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲಿವೆ. ಪ್ರತಿದಿನ 89 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ರೈತರಿಗೆ ಕೆಎಂಎಫ್ ಮೇಲಿರುವ ವಿಶ್ವಾಸಕ್ಕೆ‌ ಸಾಕ್ಷಿಯಾಗಿದೆ ಎಂದರು.

12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ ಭದ್ರತೆ : ಕೆಎಂಎಫ್ ವತಿಯಿಂದ ರಾಜ್ಯದ ಎಲ್ಲ 12 ಲಕ್ಷ ಹಸು-ಎಮ್ಮೆಗಳಿಗೆ ವಿಮೆ‌ ಭದ್ರತೆ ಒದಗಿಸಲಾಗುವುದು. ಇದರಿಂದ ಹೈನುಗಾರರಿಗೆ ಅನುಕೂಲವಾಗಲಿದೆ. ಸದ್ಯಕ್ಕೆ 15 ಸಾವಿರ ಕೋಟಿ ವಾರ್ಷಿಕ ವಹಿವಾಟನ್ನು ಮುಂದಿನ ನಾಲ್ಕು ವರ್ಷಗಳಲ್ಲಿ 25 ಸಾವಿರ ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.

4-5 ಲಕ್ಷ ಲೀಟರ್ ಹಾಲು ಸಂಗ್ರಹಿಸಿದರೆ ಬೆಳಗಾವಿಯಲ್ಲಿ ಮೆಗಾ ಡೇರಿ ನಿರ್ಮಾಣ ಸಾಧ್ಯವಾಗಲಿದೆ ಎಂದು ಜಾರಕಿಹೊಳಿ ಹೇಳಿದರು.

ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯವರಾದ ಬಸನಗೌಡ ಪಾಟೀಲ್​ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕೆಎಂಎಫ್ ಉತ್ಪನ್ನಗಳ ಬಿಡುಗಡೆ :

ಕೆಎಂಎಫ್ ಬ್ರ್ಯಾಂಡಿನ ನಂದಿನಿ ಚಾಕೊಲೇಟ್, ಬಾದಾಮ ಹಲ್ವಾ, ಐದು ಬಗೆಯ ಬ್ರೆಡ್, ಐಸ್ ಕ್ರೀಂ ಮತ್ತಿತರ ಹೊಸ ಉತ್ಪನ್ನಗಳನ್ನು ಗಣ್ಯರು ವೇದಿಕೆಯಲ್ಲಿ ಬಿಡುಗಡೆಗೊಳಿಸಿದರು. ಐಸ್ ಕ್ರೀಂ ಬಿಡುಗಡೆಗೊಳಿಸಿದ ಗಣ್ಯರು ವೇದಿಕೆಯ ಮೇಲೆಯೇ ಐಸ್ ಕ್ರೀಂ ಸೇವಿಸುವ ಮೂಲಕ ಗಮನ ಸೆಳೆದರು. ರಾಜ್ಯದ ಎಲ್ಲ ಹದಿನಾಲ್ಕು ಯೂನಿಯನ್​ಗಳ ಅಧ್ಯಕ್ಷರು ಸೇರಿದಂತೆ ಸಾವಿರಾರು ಜನರು ಸಮಾರಂಭದಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.