ಬೆಳಗಾವಿ: ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಆಗುತ್ತಿರುವ ಮಳೆಯಿಂದಾಗಿ 200 ಎಕರೆ ಜಮೀನಿನಲ್ಲಿ ಬೆಳೆದ ಈರುಳ್ಳಿ ಬೆಳೆ ಸಂಪೂರ್ಣ ನೆಲಕಚ್ಚಿದ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಎದುರಿಸುವಂತಾಗಿದೆ.
ಜಿಲ್ಲೆಯ ಮೂಡಲಗಿ ತಾಲೂಕಿನ ತಿಮ್ಮಾಪುರ ಗ್ರಾಮದ ರೈತ ಭೀಮಪ್ಪ ಮಬನೂರ ಸೇರಿ ಈರುಳ್ಳಿ ಬೆಳೆ ಬೆಳೆದು ರೈತರು ತೊಂದರೆಯಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ, ತಿಮ್ಮಾಪುರ ಗ್ರಾಮ ಒಂದರಲ್ಲಿಯೇ 200ಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಹಾನಿಯಾಗಿದೆ.
ರೈತರು ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಷ್ಟರಲ್ಲಿ ಈರುಳ್ಳಿ ಬೆಳೆ ನೀರುಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ಅನ್ನದಾತನದ್ದಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಒತ್ತಾಯ ಮಾಡಿದ್ದಾರೆ.