ಬೆಳಗಾವಿ: ಮರಾಠಿ ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಪ್ರತಿಭಟನೆ ನಡೆಸಿದೆ.
ಬೆಳಗಾವಿಯ ಗ್ಲೋಬ್ ಚಿತ್ರ ಮಂದಿರದಲ್ಲಿ ಪ್ರದರ್ಶನವಾಗುತ್ತಿದ್ದ ತಾನಾಜಿ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಚಿತ್ರ ಮಂದಿರದ ಬಳಿ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ನವನಿರ್ಮಾಣ ಸೇನೆ ಕಾರ್ಯಕರ್ತರನ್ನು ಕ್ಯಾಂಪ್ ಠಾಣೆಯ ಪೊಲೀಸರು ವಶಕ್ಕೆ ಪಡೆದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.