ಬೆಳಗಾವಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಳೆ ಬೆಳಗಾವಿ ಉತ್ತರ ಮತಕ್ಷೇತ್ರದ ವಿಜೇತ ಕಾಂಗ್ರೆಸ್ ಅಭ್ಯರ್ಥಿ ರಾಜು ಸೇಠ್ ಅವರ ಗೆಲುವಿನ ಸಂಭ್ರಮಾಚರಣೆಯಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ನಗರದ ಆರ್‌ಪಿಡಿ ಕ್ರಾಸ್ನಲ್ಲಿ ಬ್ಯಾರಿಕೇಡ್ ಹಾಕಿ ಜನರನ್ನು ತಡೆದಿದ್ದ ಸಂದರ್ಭದಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಂಭ್ರಮಾಚರಣೆ ನಡೆಯುತ್ತಿತ್ತು. ಯುವಕನೋರ್ವ ಜಿಂದಾಬಾದ್ ಜಿಂದಾಬಾದ್ ಎಂದು ಕೂಗಿದಾಗ ಇನ್ನುಳಿದ ಯುವಕರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಟಿಳಕವಾಡಿ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಕಿಡಿಗೇಡಿಗಳ ವಿರುದ್ಧ ಕೇಸು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ