ETV Bharat / state

ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಕ್ಕೆ ನಿಂತ ಪಂಚಮಸಾಲಿ ಸಮಾಜ: ಸಂಜಯ್ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹ - ಶಾಸಕಿ ​​ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ನಾಲಿಗೆ ಹರಿಬಿಟ್ಟಿ ಶಾಸಕ

ಶಾಸಕಿ ​​ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಮಾಜಿ ಶಾಸಕ ಸಂಜಯ್​ ಪಾಟೀಲ್​ ನಾಲಿಗೆ ಹರಿಬಿಟ್ಟಿದ್ದ ವಿಚಾರ ಸಂಬಂಧ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿಗೆ ಆಗ್ರಹಿಸಿದ್ದಾರೆ.

panchamasali-community-leader-demanded-to-action-against-mla-sanjay-patil
ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆನಿಂತ ಪಂಚಮಸಾಲಿ ಸಮಾಜ: ಸಂಜಯ್ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹ
author img

By

Published : Oct 3, 2021, 2:23 PM IST

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕ್ರಮ ಜರುಗಿಸುವಂತೆ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ನಿಂತ ಪಂಚಮಸಾಲಿ ಸಮಾಜ: ಸಂಜಯ್ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹ

ನಗರದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಕ್ಕೆ ಪಂಚಮಸಾಲಿ ಸಮುದಾಯ ಇದೆ. ಸಂಜಯ್ ಪಾಟೀಲ್ ಹೇಳಿಕೆಯನ್ನ ಲಿಂಗಾಯತ ಪಂಚಮಸಾಲಿ ಸಮುದಾಯ ಖಂಡಿಸುತ್ತದೆ. ಪಂಚಮಸಾಲಿ ಲಿಂಗಾಯತ ಸಮುದಾಯದ ಶಾಸಕಿ ಬಗ್ಗೆ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಹೇಳಿಕೆ ನೋಡಿದ್ದೇವೆ ಎಂದರು.

ಇಡೀ ಮಹಿಳಾ ಸಮುದಾಯಕ್ಕೆ ಸಂಜಯ್ ಪಾಟೀಲ್ ಅವಹೇಳನ ಮಾಡಿದಂತಾಗಿದ್ದು, ಅವರು ಕ್ಷಮೆಯಾಚಿಸಬೇಕು. ಜೊತೆಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿಗೆ ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಇದೇ ರೀತಿ ಹೇಳಿಕೆ ನೀಡಿದರೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ರವಾನಿಸಿದ್ದಾರೆ.

ಇದನ್ನೂ ಓದಿ: ಸಿಂದಗಿ, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.