ETV Bharat / state

2ಎ ಮೀಸಲಾತಿ ಫೈಟ್.. ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ - ಮಾಜಿ ಶಾಸಕರ ಸಭೆ; ಬಸವಜಯ ಶ್ರೀ ಮಾಹಿತಿ - Panchamasali community

2A Reservation Fight: 2ಎ ಮೀಸಲಾತಿಗೆ ಆಗ್ರಹಿಸಿ ಡಿ.5ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಶಾಸಕರ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ

author img

By ETV Bharat Karnataka Team

Published : Nov 30, 2023, 7:04 PM IST

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ - ಮಾಜಿ ಶಾಸಕರ ಸಭೆ ಕರೆದಿದ್ದೇವೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲು ನಿರ್ಧರಿಸಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯ ಕಾರಿಣಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಸಭೆಗೆ ಕರೆದುಕೊಂಡು ಬರಲು ಆಡಳಿತ ಪಕ್ಷದ ಐವರು ಶಾಸಕರಿಗೆ ಮನವಿ ಮಾಡಿದ್ದೇವೆ. ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ, ಶಾಸಕರಾದ ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ, ಮಾಜಿ ಸಚಿವ ಎಬಿ ಪಾಟೀಲ ಅವರಿಗೆ ಜವಾಬ್ದಾರಿ ನೀಡಲಾಗಿದೆ. ನಮ್ಮ ಹೋರಾಟ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ‌ಸಿಎಂಗೆ ಮನವಿ ಮಾಡುತ್ತೇವೆ ಎಂದರು.

ಇದೇ ಅಧಿವೇಶನ ವೇಳೆ ಸುವರ್ಣಸೌಧ ಎದುರು ಇಷ್ಟಲಿಂಗ ಪೂಜೆ‌ ಮೂಲಕ ಹೋರಾಟ ನಡೆಸಲಿದ್ದೇವೆ. ಸಿಎಂ ಸಭೆ ಬಳಿಕ ನಮ್ಮ ಶಾಸಕರ ಜೊತೆಗೆ ಚರ್ಚಿಸಿ ದಿನಾಂಕ ನಿಗದಿ ಮಾಡುತ್ತೇವೆ. ಲೋಕಸಭೆ ಚುನಾವಣೆ ಒಳಗೆ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಎಲ್ಲ ಲಿಂಗಾಯತ ಒಳಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಬೇಕು‌. ಇಲ್ಲವಾದರೆ ಬೆಂಗಳೂರು, ಬೆಳಗಾವಿ, ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ ನಡೆಸಬೇಕಾಗುತ್ತದೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೂಡಲಸಂಗಮ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಮೂರು ವರ್ಷಗಳಿಂದ ಹೋರಾಟ ಮಾಡಿ ರಾಜ್ಯ ಹಾಗೂ ಕೇಂದ್ರದ ಮೇಲೆ ಒತ್ತಡ ಹೇರುತ್ತಿದ್ದೇವೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದ ಬಳಿಕ ನಮ್ಮ ನಿಯೋಗ ಸಿಎಂ ಭೇಟಿ ಮಾಡಿ ಚರ್ಚಿಸಿತ್ತು. ಹಿಂದುಳಿದ ಆಯೋಗದ ವರದಿ ಪಡೆದು ಚರ್ಚೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯಲಿಲ್ಲ, ಹೀಗಾಗಿ ಹೋರಾಟ ಮರಳಿ ಆರಂಭಿಸಿದ್ದೇವೆ. ಶ್ರಾವಣ ಮಾಸದಲ್ಲಿ ಇಷ್ಟಲಿಂಗ ಪೂಜೆ ಮೂಲಕ ನಿಪ್ಪಾಣಿಯಿಂದ ಹೋರಾಟ ಆರಂಭಿಸಿದ್ದೆವು. ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಧಾರವಾಡದಲ್ಲೂ ಹೋರಾಟ ಮಾಡಿದ್ದೇವೆ. ಹೀಗಿದ್ದರೂ ನಮ್ಮ ಸಮಾಜದ ಬಗ್ಗೆ ಕೇಂದ್ರ ‌ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

’ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲು ಅತಿ ಮುಖ್ಯ’: ಇದಕ್ಕೂ ಮೊದಲು ಸಭೆಯಲ್ಲಿ‌ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಾತಿ ಮುಖ್ಯ. ನಮ್ಮಲ್ಲಿ ಮೊದಲು ಒಗ್ಗಟ್ಟಿರಬೇಕು. ರಾಜ್ಯದಲ್ಲಿ ಬಹುಸಂಖ್ಯಾತರು ನಾವು. ಆದರೆ, ಬಾಯಿ ಸತ್ತವರು ನಾವು. ಪಾದಯಾತ್ರೆ ಮೂಲಕ ಒಗ್ಗಟ್ಟಿನ ಮೂಲಕ ಹೋರಾಟ ಮಾಡಿದ್ದೇವೆ. ಸರ್ಕಾರದ ಗಮನಕ್ಕೆ ತನ್ನಿ ಅಂತಾ ಸಾಕಷ್ಟು ಬಾರಿ ಹೇಳಿದ್ದಾರೆ. ಬಹಳಷ್ಟು ತಾಂತ್ರಿಕ ಅಂಶಗಳನ್ನ ನಿಮ್ಮ ಮುಂದೆ ಹೇಳಲು ಆಗುವುದಿಲ್ಲ. ಅದೆಲ್ಲವನ್ನೂ ಸ್ವಾಮೀಜಿ ಅವರ ಮುಂದೆ ಹೇಳಿದ್ದೇನೆ. ಐದನೇ ತಾರೀಖು ಶಾಸಕರ ಸಭೆ ಮಾಡ್ತಿರುವ ವಿಚಾರ ಸಿಎಂ ಅವರ ಗಮನಕ್ಕೆ ತರುತ್ತೇನೆ ಎಂದರು.

ಇನ್ನು ಬೇರೆ ಸಮಾಜದವರು ನಮ್ಮ ಹೋರಾಟಕ್ಕೆ ಕೈಜೋಡಿಸಬೇಕು. ಮೀಸಲಾತಿ ಕ್ಷೇತ್ರದಲ್ಲಿ ನಮ್ಮವರು ಬೇರೆ ಸಮಾಜಕ್ಕೆ ಬೆಂಬಲ ನೀಡ್ತಾರೆ. ಅಂತವರು ಕೂಡ ನಮ್ಮ ಸಮಾಜಕ್ಕೆ ಬೆಂಬಲ ನೀಡಬೇಕು. ಸಿಎಂ ಮತ್ತು ಡಿಸಿಎಂ, ಮಂತ್ರಿಗಳಿಗೆ ಸಂಪೂರ್ಣ ವಿಚಾರ ಗೊತ್ತಿದ್ದು, ನಿರ್ಧಿಷ್ಟ ಕಾಲದಲ್ಲಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅಂತಾ ಕಾಯುತ್ತಿದ್ದೇನೆ. ಒಳಗಿದ್ದರೂ ಹೊರಗಿದ್ರೂ ನಮ್ಮದು ಹೋರಾಟ ಇರುತ್ತೆ‌. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಹೇಳಿದ್ದೇವೆ. ಯಾರಿಗೂ ತೊಂದರೆ ಆಗದಂತೆ ನಮ್ಮ ಸಮಾಜಕ್ಕೆ ಮೀಸಲಾತಿ ತರೋಣ. ಯಾರು ಹೋರಾಟದಿಂದ ಹಿಂದೆ ಸರಿಯಬಾರದು. ಐದನೇ ತಾರೀಖು ಸಭೆ ಫಿಕ್ಸ್ ಮಾಡಿ ನಾವು ಬರುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಸಚಿವ ಶಶಿಕಾಂತ ನಾಯಿಕ, ಮಾಜಿ ಶಾಸಕ ಹೆಚ್​ ಎಸ್ ಶಿವಶಂಕರಪ್ಪ, ಸಮಾಜದ ಮುಖಂಡರಾದ ಆರ್​ ಕೆ ಪಾಟೀಲ, ಕಿರಣ ಸಾಧುನವರ, ರೋಹಿಣಿ ಪಾಟೀಲ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ: 2A ಮೀಸಲು ಹೋರಾಟ; ಇಷ್ಟಲಿಂಗ ಪೂಜೆ ನೆರವೇರಿಸಿ ಹೆದ್ದಾರಿಯಲ್ಲಿ ಪ್ರತಿಭಟಿಸಿದ ಬಸವ ಜಯಮೃತ್ಯುಂಜಯ ಶ್ರೀ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.