ETV Bharat / state

ವಿಧಾನ ಪರಿಷತ್‌ನಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ - ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ

ಸುವರ್ಣಸೌಧದಲ್ಲಿ ನಿನ್ನೆ (ಬುಧವಾರ) ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ನಾಲ್ಕು ವಿಧೇಯಕಗಳನ್ನು ಅಂಗೀಕಾರ ಮಾಡಲಾಯಿತು.

Vidhan Parishad
ನಾಲ್ಕು ವಿಧೇಯಕಗಳಿಗೆ ಅಂಗೀಕಾರ
author img

By ETV Bharat Karnataka Team

Published : Dec 14, 2023, 9:35 AM IST

ಬೆಳಗಾವಿ/ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು.

ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಯಲೋಸಲು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೋರಿದರು.

2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸ್​ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧೇಯಕವನ್ನು ಪರ್ಯಾಲೋಸಬೇಕೆಂದು ಕೋರಿದರು. 2023ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಪರ್ಯಾಯಲೋಚಿಸಲು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕೋರಿದರು. ಅದೇ ರೀತಿ 2023ನೇ ಸಾಲಿನ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ- 2023 ಅನ್ನು ಪರ್ಯಾಯಲೋಚಿಸಲು ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ ಸುಧಾಕರ್ ಕೋರಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರು ಈ ವಿಧೇಯಕಗಳ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿದರು. ಚರ್ಚೆಯ ಬಳಿಕ ಸಭಾಪತಿಗಳು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಸದನ ಸದಸ್ಯರು ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದರು. ಸಚಿವರು, ವಿಧೇಯಕಗಳನ್ನು ಅಂಗೀಕರಿಸಲು ಕೋರಿದ ಬಳಿಕ ಸಭಾಪತಿಯವರು ಈ ವಿಧೇಯಕಗಳ ಅಂಗೀಕಾರಕ್ಕೆ ವಿಧಾನ ಪರಿಷತ್‌ನಿಂದ ಅನುಮೋದನೆ ದೊರೆತಿದೆ ಎಂದು ಘೋಷಿಸಿದರು.

ವಿಧಾನಸಭೆಯಲ್ಲಿ ಧರಣಿ ಮಧ್ಯೆಯೇ 5 ವಿಧೇಯಕಗಳಿಗೆ ಅಂಗೀಕಾರ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತೆಲಂಗಾಣ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿದ್ದ ಸಮಯದಲ್ಲೇ 5 ವಿಧೇಯಕಗಳ ಕುರಿತು ಚರ್ಚೆ ಮಾಡದೇ ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿತ್ತು. ಇತ್ತೀಚೆಗೆ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್‌ ಉತ್ತರವನ್ನು ತಿರಸ್ಕರಿಸುವುದಾಗಿ ಹೇಳಿದ ಬಿಜೆಪಿ ಶಾಸಕರು, ವಿವಾದಾತ್ಮಕ ಹೇಳಿಕೆ ನೀಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು.

ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, 2023ನೇ ಸಾಲಿನಲ್ಲಿ ಕರ್ನಾಟಕ ವೈದ್ಯಕೀಯ ಕೋರ್ಸ್​ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡನೆ ಮಾಡಿದ್ದರು.

ಕಂದಾಯ ಇಲಾಖೆಗೆ ಸೇರಿದ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಗಳನ್ನು ಪರ್ಯಾಲೋಚನೆಗೆ ಮಂಡಿಸಿದ್ದರು. ಸಚಿವ ಸುಧಾಕ‌ರ್, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕವನ್ನು ಮಂಡಿಸಿದ್ದರು. ಯಾವುದೇ ಚರ್ಚೆಯಿಲ್ಲದೆ ಒಟ್ಟು 5 ವಿಧೇಯಕಗಳು ಅಂಗೀಕಾರಗೊಂಡಿದ್ದವು.

ಇದನ್ನೂ ಓದಿ: 3542.10 ಕೋಟಿ ರೂ. ಮೊತ್ತದ ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.