ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಸಲಾಪೂರ ಗ್ರಾಮದಲ್ಲಿ ಜನರು ಸಾಮಾಜಿಕ ಅಂತರ ಮರೆತು ಸಂತೆಯಲ್ಲಿ ತರಕಾರಿ ಖರೀದಿಸುತ್ತಿದ್ದರು.
ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಜನರು ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು. ಸ್ಥಳೀಯ ಪಂಚಾಯತಿ ಅಧಿಕಾರಿಗಳು ಈ ಬಗ್ಗೆ ಜನರಿಗೆ ಬುದ್ದಿ ಹೇಳುವ ಗೋಜಿಗೆ ಹೋಗಿಲ್ಲ. ಹೀಗಾಗಿ ಅಧಿಕಾರಿಗಳ ನಿರ್ಲಕ್ಷ್ಯವೂ ಇಲ್ಲಿ ಎದ್ದು ಕಾಣುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ.