ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ರವಿ ವೈನ್ ಶಾಪ್ ಮುಂದೆ ಮದ್ಯ ಖರೀದಿಸಲು ಮದ್ಯ ಪ್ರಿಯರು ಸರದಿ ಸಾಲಿನಲ್ಲಿ ನಿಂತಿದ್ದರು.
ಪಟ್ಟಣದ ಸಿಎಲ್-2 ಹಾಗೂ ಎಮ್ಎಸ್ಐಎಲ್ ಮದ್ಯದ ಅಂಗಡಿಗಳು ಓಪನ್ ಆದ ಹಿನ್ನೆಲೆಯಲ್ಲಿ ಮದ್ಯ ಪ್ರಿಯರಲ್ಲಿ ಹರ್ಷ ಮೂಡಿದೆ. ಹುಕ್ಕೇರಿ ಪಟ್ಟಣದಲ್ಲಿ ಸರದಿ ಸಾಲಿನಲ್ಲಿ ನಿಂತು ಮದ್ಯ ಖರೀದಿ ಮಾಡುತ್ತಿರುವ ಮದ್ಯ ಪ್ರಿಯರು ಎಂಎಸ್ಐಎಲ್ ಮುಂದೆ ಅರ್ಧ ಕಿಲೋಮೀಟರ್ ವರೆಗೂ ಸರದಿ ಸಾಲಿನಲ್ಲಿ ಸಾಲುಗಟ್ಟಿ ನಿಂತಿದ್ದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಹುಕ್ಕೇರಿ, ಕಾಗವಾಡ, ಅಥಣಿ, ನಿಪ್ಪಾಣಿ, ರಾಯಭಾಗದಲ್ಲಿ ಮದ್ಯದಂಗಡಿಗಳು ತೆರೆದಿದ್ದು ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿಸುತ್ತಿದ್ದಾರೆ. ಕೆಲವು ಕಡೆ ಮಾಸ್ಕ್ ಧರಿಸದೆ ಆಗಮಿಸಿದ ಜನರು ಬಂದಿದ್ದು, ಮದ್ಯದ ಅಂಗಡಿಗಳಿಗೆ ಪೊಲೀಸರು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಇನ್ನು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಎಚ್ಚರಿಕೆ ನೀಡಿದರು.
ಹಾಗೆಯೇ ಕಂಟೈನ್ಮೆಂಟ್ ಝೋನ್‌ಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಹಾಗೂ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.