ETV Bharat / state

ಸಮೀಕ್ಷೆ ಬಳಿಕ ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ: ಸಚಿವ ಈಶ್ವರಪ್ಪ - minister ks Ishwarappa

ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸಚಿವ ಈಶ್ವರಪ್ಪ
author img

By

Published : Sep 7, 2019, 5:26 PM IST

ಚಿಕ್ಕೋಡಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪ

ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಭೇಟಿ ನೀಡಿದ ಅವರು, ತಾಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿ ಪಾತ್ರದಲ್ಲಿ ಬೆಳೆಹಾನಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಇಷ್ಟು ಜಲಪ್ರಳಯ ನನ್ನ ಜೀವನದಲ್ಲಿಯೇ ನೋಡಿಲ್ಲ. ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಹಾಗೂ ಶಾಶ್ವತ ಪರಿಹಾರ ಕುರಿತು ಆಲೋಚಿಸಲಾಗಿದೆ. ತಾತ್ಕಾಲಿಕವಾಗಿ ಚೆಕ್ ಮೂಲಕ ಪರಿಹಾರ ನೀಡಲಾಗಿದೆ. ಬರುವ ದಿನಗಳಲ್ಲಿ ಬಿದ್ದ ಮನೆಗೆ ಪರಿಹಾರ ಹಾಗೂ ಮನೆ ಕಟ್ಟಿ ಕೊಡಲು ಪರಿಹಾರ ನೀಡಲಾಗುವುದು ಎಂದರು.

ಮಾಂಜರಿ ಗ್ರಾಮದ ಅಂಬೇಡ್ಕರ್ ಕಾಲೋನಿ, ಮತ್ತಿತರ ಪ್ರದೇಶದಲ್ಲಿ ಸಂಚರಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ಅಲ್ಲಿನ ಜನರ ಅಹವಾಲುಗಳನ್ನು ಆಲಿಸಿದರು. ಮನೆಗಳು ಸಂಪೂರ್ಣವಾಗಿ ಶಿಥಿಲಗೊಂಡಿರುವುದರಿಂದ ಕೂಡಲೇ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು. ಸರ್ಕಾರಕ್ಕೆ ಪರಿಸ್ಥಿತಿಯ ಸಂಪೂರ್ಣ ಅರಿವು ಇದ್ದು, ಸಮೀಕ್ಷೆ ಮುಗಿದ ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Intro:ಸಮೀಕ್ಷೆ ಬಳಿಕ ಶಾಶ್ವತ ಪರಿಹಾರ : ಸಚಿವ ಈಶ್ವರಪ್ಪ
Body:
ಚಿಕ್ಕೋಡಿ :

ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಭೇಟಿ ನೀಡಿದ ಅವರು, ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿಪಾತ್ರದಲ್ಲಿ ಬೆಳೆಹಾನಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ, ಕರ್ನಾಟಕದಲ್ಲಿ ಇಷ್ಟು ಜಲಪ್ರಳಯ ನನ್ನ ಜೀವನದಲ್ಲಿಯೇ ನೋಡಿಲ್ಲ. ಕರ್ನಾಟಕ ಸೇರಿದಂತೆ 18 ರಾಜ್ಯಗಳಲ್ಲಿ ಆಗಿರುವ ಜಲಪ್ರಳಯ, ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಹಾಗೂ ಶಾಶ್ವತ ಪರಿಹಾರ ಕುರಿತು ಆಲೋಚಿಸಲಾಗಿದೆ, ತಾತ್ಕಾಲಿಕವಾಗಿ ಚೆಕ್ ಮೂಲಕ ಪರಿಹಾರ ನೀಡಲಾಗಿದೆ, ಬರುವ ದಿನಗಳಲ್ಲಿ ಬಿದ್ದ ಮನೆಗೆ ಪರಿಹಾರ ಹಾಗೂ ಮನೆ ಕಟ್ಟಿ ಕೊಡಲು ಪರಿಹಾರ ನೀಡಲಾಗುವುದು.

ಪ್ರವಾಹ ಬಂದು ತಿಂಗಳು ಕಳೆದರೂ ಸಂತ್ರಸ್ತರಿಗೆ ತಲುಪದ ಪರಿಹಾರ ವಿಚಾರವಾಗಿ,
ನಮ್ಮ ಮನೆ ಬಿದ್ರೂ ಕೂಡ ರಿಪೇರಿ ಮಾಡಲು ಸಮಯ ಬೇಕು ಅಂತಾ ಸಚಿವರಿಂದ ಉಡಾಫೆ ಉತ್ತರ, ಯಾವುದೇ ಅಧಿಕಾರಿಗಳೂ ಕೂಡ 24 ಗಂಟೆಗಳ ನಿದ್ದೆ ಮಾಡದೇ ಸಂತ್ರಸ್ತರ ಪರಿಹಾರ ಕೆಲಸ ಮಾಡಿದ್ದಾರೆ, ದಾಖಲಾತಿಗಳು ಈಗಾಗಲೇ ಪ್ರವಾಹದಿಂದ ಹಾಳಾಗಿವೆ ದಾಖಲಾತಿ ಇಲ್ಲದೇ ಅಧಿಕಾರಿಗಳು ಪರಿಹಾರ ಹಣ ನೀಡುತಿಲ್ಲ ಈ ವಿಚಾರವಾಗಿ ಈಗಾಗಲೇ ದಾಖಲಾತಿಗಳ ಮಾಹಿತಿ ನಮ್ಮ ಸರ್ಕಾರಿ ಕಛೇರಿಯಲ್ಲಿವೆ ಅಲ್ಲಿಂದ ಮಾಹಿತಿ‌ ಪಡೆದುಕೊಳ್ಳಲಿ ಎಂದು ಹೇಳಿ ಮಾಧ್ಯಮದವರ ಪ್ರಶ್ನೆಗೆ ಮೈಕ್ ತಳ್ಳಿ ಮುನ್ನಡೆದ ಸಚಿವ ಈಶ್ವರಪ್ಪ

ಮಾಂಜರಿ ಗ್ರಾಮದ ಅಂಬೇಡ್ಕರ್ ಕಾಲನಿ ಮತ್ತಿತರ ಪ್ರದೇಶದಲ್ಲಿ ಸಂಚರಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಅಲ್ಲಿನ ಜನರ ಅಹವಾಲುಗಳನ್ನು ಆಲಿಸಿದರು. ಮನೆಗಳು ಸಂಪೂರ್ಣವಾಗಿ ಶಿಥಿಲಗೊಂಡಿರುವುದರಿಂದ ಕೂಡಲೇ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಸರ್ಕಾರಕ್ಕೆ ಪರಿಸ್ಥಿತಿಯ ಸಂಪೂರ್ಣ ಅರಿವು ಇದ್ದು, ಸಮೀಕ್ಷೆ ಮುಗಿದ ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಹಾಗೂ ಎಂ ಎಲ್ ಸಿ ಮಹಾಂತೇಶ ಕವಟಗಿಮಠ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಮತ್ತಿತರರು ಉಪಸ್ಥಿತರಿದ್ದರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.