ಅಥಣಿ: ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ವಿರೋಧಿಸಿ ಅಥಣಿ ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಉಪ ತಹಶೀಲ್ದಾರ್ ರಾಜು ಬುರ್ಲಿ ಅವರ ಮುಖಾಂತರ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಅಥಣಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ - ಅಥಣಿ ಪ್ರತಿಭಟನೆ ಸುದ್ದಿ
ಕೇಂದ್ರ ಸರ್ಕಾರ ಜನಸಾಮಾನ್ಯರ ಸರ್ಕಾರ ಅಲ್ಲ. ಜನರ ಹಿತ ಕಾಪಾಡಲು ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಅಥಣಿ: ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ವಿರೋಧಿಸಿ ಅಥಣಿ ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂತರ ಉಪ ತಹಶೀಲ್ದಾರ್ ರಾಜು ಬುರ್ಲಿ ಅವರ ಮುಖಾಂತರ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಜನರು ಮತ್ತಷ್ಟು ಭೀತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ತೈಲ ಬೆಲೆ ಏರಿಕೆ ಮಾಡುತ್ತಿರುವುದು ಯಾರ ಹಿತಕ್ಕಾಗಿ? ತೈಲ ಬೆಲೆ ಏರಿಕೆ ಎಲ್ಲ ವಲಯಗಳಿಗೂ ಪರಿಣಾಮ ಬೀರಿದ್ದು, ಅಗತ್ಯ ವಸ್ತುಗಳ ಬೆಳೆಗಳು ಕೂಡ ಗಗನಕ್ಕೇರುತ್ತಿದೆ. ರೈತರ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದೆ. ಇಂತಹ ಭೀಕರ ಪರಿಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿದ್ದರಿಂದ ಜನರ ಸಹಾಯಕ್ಕೆ ಸರ್ಕಾರ ಧಾವಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.