ETV Bharat / state

ಅನುಮತಿ ಇಲ್ಲದೇ ಪ್ರತಿಭಟನೆ.. ಬೆಳಗಾವಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಬಂಧನ

ನಿನ್ನೆ (ಫೆ.24) ಉತ್ತರ ಪ್ರದೇಶದಲ್ಲಿ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಿನಾಕಾರಣ ಬಂಧನ ಮಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ನಿನ್ನೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಇಂದು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

PFI activists protest
ಪಿಎಫ್‌ಐ ಸಂಘಟನೆ ಪ್ರತಿಭಟನೆ
author img

By

Published : Feb 25, 2021, 4:28 PM IST

ಬೆಳಗಾವಿ: ಪೊಲೀಸ್ ಇಲಾಖೆ ಅನುಮತಿ ಇಲ್ಲದೇ ನಿನ್ನೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇಲ್ಲಿನ ಅಜಂ ನಗರದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾ ಕಾರ್ಯಕರ್ತರು ನಿನ್ನೆ (ಫೆ.24) ಉತ್ತರ ಪ್ರದೇಶದಲ್ಲಿ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಿನಾಕಾರಣ ಬಂಧನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಆದ್ರೆ, ಪ್ರತಿಭಟನೆಗೂ ಮುನ್ನ ಪಿಎಫ್ಐ ಕಾರ್ಯಕರ್ತರು ಸಂಬಂಧಿಸಿದ ಎಪಿಎಂಸಿ ಪೊಲೀಸ್ ಠಾಣೆ ಅನುಮತಿ ಪಡೆದುಕೊಂಡಿರಲಿಲ್ಲ. ಹೀಗಾಗಿ ಅನುಮತಿ ಇಲ್ಲದೇ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಎಪಿಎಂಸಿ ಸಿಪಿಐ ಜಾವೇದ್ ಮುಶಾಪುರೆ ನೇತೃತ್ವದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿನ್ನೆಯಿಂದ ಈಗಾಗಲೇ 7ರಿಂದ 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149, 289ರನ್ವಯ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.