ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆ ಗೆಲ್ಲಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ಕ್ಷೇತ್ರದಲ್ಲಿ ಚುನಾವಣೆ ಅಭ್ಯರ್ಥಿಗಳ ಘೋಷಣೆ ಆಗಿದೆ. ಕಾಗವಾಡ ಕ್ಷೇತ್ರದಿಂದ ಶ್ರೀಮಂತ ಪಾಟೀಲ್, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಸೋಮವಾರ ನಾಮಪತ್ರ ಸಲ್ಲಿಸಲ್ಲಿದ್ದಾರೆ. ರಾಜ್ಯದಲ್ಲಿ ಸುಭದ್ರ ಸರ್ಕಾರ ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಕೆಲವೆಡೆ ಸಹಜವಾಗಿ ಸ್ವಲ್ಪ ಗೊಂದಲ ಇದೆ. ಅದನ್ನೆಲ್ಲ ಮೀರಿ ಗೆಲುವು ಸಾಧಿಸಲು ಆದ್ಯತೆ ನೀಡಲಾಗುತ್ತಿದೆ. ಎಲ್ಲ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದರು.
ಶಾಸಕ ಇಲ್ಲದ ಸಂದರ್ಭದಲ್ಲಿ ನನ್ನನ್ನು ಡಿಸಿಎಂ ಮಾಡಿದ್ದಾರೆ. ಪಕ್ಷ ಎಲ್ಲ ಆಲೋಚನೆ ಮಾಡಿ ನಿರ್ಧಾರ ಮಾಡಿದೆ. ಸೂಕ್ತ ಸಂದರ್ಭದಲ್ಲಿ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ನಾನು, ಕಾರ್ಯಕರ್ತರು ಚಿಂತೆ ಮಾಡೋ ಅವಶ್ಯಕತೆ ಇಲ್ಲ. ಒಬ್ಬ ವ್ಯಕ್ತಿ ಹೊಸದಾಗಿ ಪಕ್ಷಕ್ಕೆ ಬಂದಾಗ ಗೊಂದಲ ಸಹಜ. ಕಾಗೆ ಅವರು ಬಿಜೆಪಿಯಿಂದ ಹೋದ ನಂತರ ಕಾಂಗ್ರೆಸ್ ಪಕ್ಷದಲ್ಲಿಯೂ ಗೊಂದಲ ಆಗಿದೆ ಎಂದರು.