ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತು ಪಟ್ಟಣದ ಮುಖ್ಯ ರಸ್ತೆಗಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಆಶಾ ಕಾರ್ಯಕರ್ತರು ಸೇರಿ ಜಾಥಾ ನಡೆಸಿ ಸಚ್ಛತೆ ಬಗ್ಗೆ ಅರಿವು ಮೂಡಿಸಿದರು.
ಸಾರ್ವಜನಿಕರು ದಿನನಿತ್ಯ ಬಳಕೆಯಲ್ಲಿ ಪ್ಲಾಸ್ಟಿಕ್ಅನ್ನು ಬಳಸದೆ ಪರಿಸರ ಸ್ನೇಹಿ ಕೈಚೀಲ ವಸ್ತುಗಳನ್ನು ಬಳಸಬೇಕು. ಪರಿಶುದ್ಧ ಬೆಳಕು, ಗಾಳಿ, ನೀರು ಮತ್ತು ಆಹಾರದಿಂದ ಮಾತ್ರ ಗುಣಮಟ್ಟದ ಆರೋಗ್ಯ ಕಾಪಾಡಲು ಸಾಧ್ಯ. ಹೀಗಾಗಿ ಆಹಾರದಲ್ಲಿ ಪ್ಲಾಸ್ಟಿಕ್ ಸೇರದಂತೆ ಜಾಗೃತಿ ವಹಿಸಬೇಕೆಂದು ಇಂದು ಶಾಲಾ ಮಕ್ಕಳೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಪ್ಲಾಸ್ಟಿಕ್ ನಿಷೇಧದ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಪ್ರಯತ್ನಕ್ಕೆ ಸಾರ್ವಜನಿಕರು ಕೈಜೋಡಿಸಬೇಕೆಂದು ತಾಲೂಕು ದಂಡಾಧಿಕಾರಿ ಹನುಮಂತರಾಯಪ್ಪ ತಿಳಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಪರಿಸರದಲ್ಲಿ ಏರುಪೇರಾಗುತ್ತಿದ್ದು, ದೇಶದಲ್ಲಿ ಪ್ಲಾಸ್ಟಿಕ್ ಬಳಕೆ ತಯಾರಿಕೆ ಸಂಪೂರ್ಣ ನಿಷೇಧಿಸಬೇಕು. ಸ್ವಚ್ಛ ಭಾರತ, ನಿರ್ಮಲ ಪರಿಸರ ನಿರ್ಮಾಣದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸರ್ಕಾರ ಪ್ಲಾಸ್ಟಿಕ್ ನಿಷೇಧ ಮಾಡಿದರೂ ದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಆದ್ದರಿಂದ ಪ್ರತಿದಿನ ಜನರಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸಬೇಕಿದೆ. ದೇಶದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ಖರೀದಿ ನಿಲ್ಲಬೇಕು, ಸ್ವಚ್ಛ ಪರಿಸರ ನಿರ್ಮಾಣವಾಗಬೇಕು, ಮತ್ತು ಸಾರ್ವಜನಿಕರು ಪ್ಲಾಸ್ಟಿಕ್ ಬಳಸಿದರೆ ಅವರಿಗೆ ಫೈನ್ ಕಟ್ಟಿಸಿಕೊಂಡು ರಶೀದಿ ಕೊಡುತ್ತೇವೆ ಎಂದು ತಾಲೂಕು ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಿಳಿಸಿದರು.