ETV Bharat / state

ಬೆಳಗಾವಿಯಲ್ಲಿ ಪ್ರಧಾನಿಗೆ ಕಾಯಕಯೋಗಿಗಳಿಂದ ಸ್ವಾಗತ.. ಕುಂದಾನಗರಿಯಲ್ಲಿ ಮೋದಿ ಭರ್ಜರಿ ರೋಡ್​ ಶೋ - ಈಟಿವಿ ಭಾರತ ಕನ್ನಡ

ಬೆಳಗಾವಿಗೆ ಆಗಮಿಸಿದ ಪ್ರಧಾನಿ ಮೋದಿ - ನಗರದ ಚೆನ್ನಮ್ಮ ವೃತ್ತದಿಂದ ಮೋದಿ ರೋಡ್​ ಶೋ - ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಮೋದಿ

pm-modi-road-show-at-belagavi
ಬೆಳಗಾವಿಯಲ್ಲಿ ಪ್ರಧಾನಿ ಮೋದಿ ರೋಡ್​ ಶೋ : ವಿವಿಧ ಕಾಮಗಾರಿಗಳಿಗೆ ಚಾಲನೆ
author img

By

Published : Feb 27, 2023, 3:29 PM IST

Updated : Feb 27, 2023, 3:58 PM IST

ಬೆಳಗಾವಿ : ಶಿವಮೊಗ್ಗ ಜಿಲ್ಲೆಯ ಸೋಗಾನೆಯಲ್ಲಿ ಇಂದು ಬೆಳಗ್ಗೆ ನೂತನ ನಿಮಾನ ನಿಲ್ದಾಣ ಉದ್ಘಾಟಿಸಿ ಬಳಿಕ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಬಳಿಕ ಅಲ್ಲಿಂದ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದಾರೆ. ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕುಂದಾನಗರಿಗೆ ಆಗಮಿಸಿದ್ದಾರೆ.

ಪ್ರಧಾನಿ ಮೋದಿಯವರು ಶಿವಮೊಗ್ಗದಿಂದ ಭಾರತೀಯ ವಾಯುಸೇನೆ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಬರಮಾಡಿಕೊಂಡರು.

ಏರ್​ಪೋರ್ಟ್​ ಸುತ್ತಮುತ್ತ ಬಿಗಿ ಭದ್ರತೆ.. ವಿಮಾನ ನಿಲ್ದಾಣ ಸುತ್ತಮುತ್ತ ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿದೆ. ಎಲ್ಲಾ ವಾಹನಗಳನ್ನು ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಗರ ಸಂಚಾರದ ವಿವಿಧ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಕುಂದಾ ನಗರಿಯಲ್ಲಿ ಮೋದಿ ರೋಡ್​ ಶೋ.. ನಗರದ ಚೆನ್ನಮ್ಮ ವೃತ್ತದಿಂದ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಚೆನ್ನಮ್ಮ ವೃತ್ತದಿಂದ 10 ಕಿಮೀನಷ್ಟು ಮೋದಿ ರೋಡ್​ ಶೋ ನಡೆಸುತ್ತಿದ್ದಾರೆ. ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಧಾನಿಗೆ ಸ್ವಾಗತ ಕೋರಿದ ಕಾಯಕ ಯೋಗಿ ಜನರು : ಪ್ರಧಾನಿ ನರೇಂದ್ರ ಮೋದಿಯವರು ನಗರದ ಕೆಎಸ್ಆರ್​ಪಿ ಮೈದಾನಕ್ಕೆ ಆಗಮಿಸುತ್ತಿದ್ದಂತೆ ಪೌರಕಾರ್ಮಿಕರು, ಕೃಷಿಕರು, ಆಟೋ ಚಾಲಕರು, ಕಾರ್ಮಿಕ ಕಾಯಕಯೋಗಿಗಳು ಪ್ರಧಾನಿ ಅವರಿಗೆ ಗುಲಾಬಿ ಹೂವು ನೀಡುವ ಮೂಲಕ ಸ್ವಾಗತ ಕೋರಿದರು.

10 ಸಾವಿರ ಮಹಿಳೆಯರಿಂದ ಪೂರ್ಣ ಕುಂಭ ಸ್ವಾಗತ : ಪ್ರಧಾನಿ ಮೋದಿ ಅವರಿಗೆ ನಗರದ ಹತ್ತು ಸಾವಿರ ಮಹಿಳೆಯರು ಪೂರ್ಣ ಕುಂಭ ಸ್ವಾಗತ ಕೋರಿದರು. ಬೆಳಗಾವಿ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.

ಬೆಳಗಾವಿಗೆ ಬಂದಿಳಿದ ಕೇಂದ್ರ ಕೃಷಿ ಸಚಿವ : ಪ್ರಧಾನಿ ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಕೇಂದ್ರ ಕೃಷಿ ಸಚಿವರಿಗೆ ಹೂಗುಚ್ಚ ನೀಡಿ ಬಿಜೆಪಿ ನಾಯಕರು ಸ್ವಾಗತಿಸಿದರು.

ದಿ. ಸುರೇಶ ಅಂಗಡಿ ನೆನೆದು ಕಣ್ಣೀರಾದ ಸಂಸದೆ ಮಂಗಳಾ ಅಂಗಡಿ : ಬೆಳಗಾವಿ ನಗರದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟನೆ ದಿವಂಗತ ಮಾಜಿ ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಅವರ ಕನಸಾಗಿತ್ತು. ಇದು ಇವತ್ತು ನನಸಾಗುತ್ತಿದೆ ಎಂದು ದಿ. ಸುರೇಶ್​ ಅಂಗಡಿ ಪತ್ನಿ ಹಾಗೂ ಬೆಳಗಾವಿಯ ಲೋಕಸಭಾ ಕ್ಷೇತ್ರದ ಸಂಸದೆ ಮಂಗಳಾ ಅಂಗಡಿ ಕಣ್ಣೀರು ಹಾಕಿದರು.

198 ಕೋಟಿ ವೆಚ್ಚದಲ್ಲಿ ಬೆಳಗಾವಿ ನಗರದ ನವೀಕರಣಗೊಂಡ ರೈಲು ನಿಲ್ದಾಣ ದಿವಂಗತ ಸುರೇಶ್ ಅಂಗಡಿ ಅವರ ಕನಸಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸುವುದಾಗಿ ಹೇಳುತ್ತಿದ್ದರು. ಸದ್ಯ ಅವರು ನಮ್ಮ ಜೊತೆ ಇಲ್ಲ ಎಂದು ಮಂಗಳಾ ಅಂಗಡಿಯವರು ಭಾವುಕರಾದರು.

ಸುಸಜ್ಜಿತವಾಗಿ ರೈಲು ನಿಲ್ದಾಣ ನವೀಕರಣಗೊಳಿಸಿದ್ದಕ್ಕೆ ಗುತ್ತಿಗೆದಾರರು ಹಾಗೂ ಹಿರಿಯ ಅಧಿಕಾರಿಗಳು ಹಾಗೂ ರೈಲ್ವೆ ಇಲಾಖೆ ಉದ್ಯೋಗಿಗಳಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಮೋದಿ ಅವರಿಂದ ಉದ್ಘಾಟನೆ ನೆರವೇರುತ್ತಿರುವುದು ತುಂಬಾ ಸಂತೋಷವಾಗಿ. ಸುರೇಶ್ ಅಂಗಡಿ ಅವರ ಕನಸು ನನಸಾಗುತ್ತಿದೆ ಎಂದು ಸಂಸದೆ ಮಂಗಳಾ ಅಂಗಡಿ ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ : ವಿಮಾನ ನಿಲ್ದಾಣ ಇಡೀ ಮಲೆನಾಡಿನ ಕನಸು ನನಸಾಗುವ ಸಂಕೇತ: ಬಿ.ಎಸ್.ಯಡಿಯೂರಪ್ಪ

Last Updated : Feb 27, 2023, 3:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.