ETV Bharat / state

ತುಮಕೂರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ.. ಪ್ರಧಾನಿ ಮೋದಿ ಘೋಷಣೆ

ತುಮಕೂರು ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಶಿರಾ ಬಳಿ ನಡೆದ ಅಪಘಾತದಲ್ಲಿ 9 ಜನ ಸಾವನ್ನಪ್ಪಿ, 12 ಗಾಯಗೊಂಡಿದ್ದಾರೆ.

ತುಮಕೂರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ಪರಿಹಾರ

author img

By

Published : Aug 25, 2022, 12:08 PM IST

Updated : Aug 25, 2022, 12:19 PM IST

ತುಮಕೂರು: ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ಪರಿಹಾರ ಘೋಷಣೆ: 'ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು' ಎಂದು ತುಮಕೂರು ಅಪಘಾತದ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ತುಮಕೂರು ಬಳಿ ಭೀಕರ ಅಪಘಾತ: ರಾಯಚೂರಿನಿಂದ ಬೆಂಗಳೂರಿಗೆ ದುಡಿಯಲು ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ 9 ಜನ ಸಾವನ್ನಪ್ಪಿದ್ದಾರೆ, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವರನ್ನು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದವರನ್ನು ಬೆಂಗಳೂರಿಗೆ ರವಾನಿಸಲಾಗಿದೆ.

ಸ್ಥಳಕ್ಕೆ ಎಸ್​ಪಿ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

  • ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು: PM

    — PMO India (@PMOIndia) August 25, 2022 " class="align-text-top noRightClick twitterSection" data=" ">

(ಇದನ್ನೂ ಓದಿ: ಶಿರಾ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ.. 9 ಮಂದಿ ದುರ್ಮರಣ)

Last Updated : Aug 25, 2022, 12:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.