ETV Bharat / state

ನೀರಿನ ಪಾಳೆಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ: ಮೂವರ ಬಂಧನ - ಚಿಕ್ಕೋಡಿ ಸುದ್ದಿ

ಬಾವಿಯ ನೀರಿನ ಪಾಳೆಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಈ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Kokatanur
ಕೊಕಟನೂರ ಕೊಲೆ ಪ್ರಕರಣ ಸಂಬಂಧ ಮೂವರ ಬಂಧನ
author img

By

Published : Feb 17, 2021, 8:02 PM IST

ಚಿಕ್ಕೋಡಿ : ಬಾವಿಯ ನೀರಿನ ಪಾಳೆಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದಿದೆ. ಇನ್ನು ಈ ಘಟನೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಗೆ ಬೆಂಕಿ ಹಚ್ಚಿದ ಆರೋಪಿಗಳಾದ ಶಂಕರ್ ಮಾದರ, ಸದಾಶಿವ ಮಾದರ, ಸುನಿಲ್​ ಮಾದರ್​ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ಫೆ. 10ರಂದು ಮಧ್ಯರಾತ್ರಿ 2 ಗಂಟೆಗೆ ದುಷ್ಕರ್ಮಿಗಳು ರೇಷನ್​ನಲ್ಲಿ ಪಡೆದಿದ್ದ ಸೀಮೆಎಣ್ಣೆ ಬಳಸಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದರು. ಈ ವೇಳೆ ಮನೆಯಲ್ಲಿದ್ದ ಪತಿ-ಪತ್ನಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾದರೂ ಪತಿ ಮಹಾದೇವ ಮತ್ತು ಪತ್ನಿ ರೇಖಾ ಮಾದರ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ಮಹಾದೇವ ಸೊಸೆ ಶಿಲ್ಪಾ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಐಗಳಿ ಪೊಲೀಸರು, ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.