ETV Bharat / state

ಬೆಳಗಾವಿಯಲ್ಲಿ ಎಂಇಎಸ್ ಸಭೆ ತಡೆಯಲು ಯತ್ನಿಸಿದ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

author img

By

Published : Nov 1, 2020, 1:01 PM IST

ನಮಗೆ ಮೆರವಣಿಗೆಗೆ ಅವಕಾಶ ಕೊಟ್ಟಿಲ್ಲ. ಎಂಇಎಸ್‌ಗೆ ಸಭೆ ನಡೆಸಲು ಅನುಮತಿ ನೀಡಿದ್ದೇಕೆ ಎಂದು ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು..

Karave activists tried to block a MES meeting in Belgavi

ಬೆಳಗಾವಿ: ಎಂಇಎಸ್ ನಡೆಸುತ್ತಿದ್ದ ಪ್ರತಿಭಟ‌ನಾ ಸಭೆ ಸ್ಥಳಕ್ಕೆ ಮೆರವಣಿಗೆ ಮೂಲಕ ಆಗಮಿಸುತ್ತಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್‌ ಸಭೆ ನಿಲ್ಲಿಸುವಂತೆ ಕನ್ನಡ ಸಂಘಟನೆ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದರು.

ಜಿಲ್ಲಾಡಳಿತದ ಕ್ರಮ ಖಂಡಿಸಿ ರೈಲ್ವೆ ಓವರ್ ಬ್ರಿಡ್ಜ್ ಮೇಲೆ ಕುಳಿತು ಕರವೇ ಕಾರ್ಯಕರ್ತರು ಪ್ರತಿಭಟಿಸಿದರು. ಎಂಇಎಸ್ ಪುಂಡರ ಪರ ನಿಂತ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಬೆಳಗಾವಿಯ ಮರಾಠಾ ಮಂದಿರ ಮಂಗಲ ಕಾರ್ಯಾಲಯದಲ್ಲಿ ಎಂಇಎಸ್ ಪ್ರತಿಭಟನಾ ಸಭೆ ನಡೆಸುತ್ತಿದೆ.

ನಮಗೆ ಮೆರವಣಿಗೆಗೆ ಅವಕಾಶ ಕೊಟ್ಟಿಲ್ಲ. ಎಂಇಎಸ್‌ಗೆ ಸಭೆ ನಡೆಸಲು ಅನುಮತಿ ನೀಡಿದ್ದೇಕೆ ಎಂದು ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ಹೋರಾಟಗಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಕರೆದೊಯ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.