ETV Bharat / state

ಕನ್ನಡ ಅನ್ನೋರೆಲ್ಲ ಬನ್ನಿ ನಮ್ಮ ಸಂಗಡ.. ಬೆಳಗಾವಿಯಲ್ಲಿ ಪೊಲೀಸರು- ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ - ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ರಾಜ್ಯ ಸರ್ಕಾರ ಜಾತಿ ಜಾತಿ ನಡುವೆ, ಕನ್ನಡಿಗರ ನಡುವೆಯೇ ವಿಷಬೀಜ ಬಿತ್ತುವ ಕಾರ್ಯ ಮಾಡುತ್ತಿದೆ. ಕೂಡಲೇ ಮರಾಠ ಪ್ರಾಧಿಕಾರ ರಚನೆ ಮಾಡಿರುವುದನ್ನು ಸರ್ಕಾರ ಹಿಂಪಡೆಯಬೇಕು..

Police detained Karave activists in Belgavi
ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು
author img

By

Published : Dec 5, 2020, 1:22 PM IST

ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮರಾಠ ಪ್ರಾಧಿಕಾರ ವಿರೋಧಿಸಿ ಹೋರಾಟ ಮಾಡುತ್ತಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು

ಮರಾಠ ಪ್ರಾಧಿಕಾರ ರಚನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಕನ್ನಡ ಪರ ಸಂಘನೆಗಳು ನೀಡಲಾದ ಬಂದ್‌ಗೆ ಬೆಳಗಾವಿಯಲ್ಲಿ ನೀರಸ ಪ್ರತ್ರಿಕ್ರಿಯೆ ವ್ಯಕ್ತವಾಗಿತ್ತು. ಆದ್ರೆ, ಕರವೇ ಕಾರ್ಯಕರ್ತರು ಸೇರಿ ಕನ್ನಡಪರ ಸಂಘಟನೆಗಳು ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ವೇಳೆ ಕನ್ನಡ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಕನ್ನಡ ಸಾಹಿತ್ಯ ಭವನದಿಂದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಂಡು ಹೊರಟ್ಟಿದ್ದ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ಮನವಿಗೆ ಸ್ಪಂದಿಸದ ನೂರಕ್ಕೂ ಅಧಿಕ ಜನ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸರು ಕರೆದೊಯ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಸಂಘಟನೆ ಮುಖಂಡ ಶ್ರೀನಿವಾಸ ತಾಳೂಕರ, ಕರ್ನಾಟಕ ಸರ್ಕಾರ ತನ್ನ ರಾಜಕೀಯ ಸ್ವಾರ್ಥಕೋಸ್ಕರ್ ಕನ್ನಡಿಗರು ಹಾಗೂ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾನ ರಚನೆ ಮಾಡಿ ಜಾತಿ ಜಾತಿ ನಡುವೆ, ಕನ್ನಡಿಗರ ನಡುವೆಯೇ ವಿಷಬೀಜ ಬಿತ್ತುವ ಕಾರ್ಯ ಮಾಡುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಮಾಡಿರುವುದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಕನ್ನಡ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರವೇ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಹಾಂತೇಶ ರಣಗಟ್ಟಿಮಠ, ರಾಜು ಕೋಲಾ, ಈರಣ್ಣಾ ಜೊಣ್ಣದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.