ಬೆಳಗಾವಿ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ ನಾಲ್ಕನ್ನು ತಡೆದು ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದಲ್ಲಿ ಪ್ರತಿಭಟನೆ ವೇಳೆ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಯರನ್ನು ಪೊಲೀಸರು ಎಳೆದು ವಾಹನದಲ್ಲಿ ಕರೆದೊಯ್ದರು.
ಇನ್ನು ಈ ಪ್ರತಿಭಟನೆ ಹಿನ್ನೆಲೆ ತಾಲೂಕಿನ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಮುಂಜಾಗ್ರತಾ ಕ್ರಮವಾಗಿ ಓರ್ವ ಎಸಿಪಿ ಇಬ್ಬರು ಸಿಪಿಐಗಳ ನೇತೃತ್ವದಲ್ಲಿ 100 ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆಯನ್ನು ಒದಗಿಸಲಾಗಿದೆ.
ಇನ್ನು ಚಿಕ್ಕೋಡಿಯಲ್ಲೂ ಶೇತಕರಿ ಸಂಘಟನೆಯಿಂದ ರಸ್ತೆ ತಡೆದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ರೈತ ಸಂಘಟನೆಗಳಿಗೆ ಸಿಐಟಿಯು, ಎ.ಐ.ಎಮ್.ಐ.ಎಮ್ ಹಾಗೂ ದಲಿತ ಸಂಘಟನೆಗಳು ಬೆಂಬಲ ನೀಡಿವೆ.
ಓದಿ: ಬೆಂಗಳೂರಿನಲ್ಲೂ ಕೃಷಿ ಕಾಯ್ದೆ ವಿರುದ್ಧ ರೈತರ ಕಹಳೆ.. ಅನ್ನದಾತರನ್ನ ವಶಕ್ಕೆ ಪಡೆದ ಪೊಲೀಸರು!