ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಗಡಿಯಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಗಡಿಯಲ್ಲಿರುವ ಕಾಗವಾಡ- ಮಹಾರಾಷ್ಟ್ರ ಪ್ರದೇಶದಲ್ಲಿ, ಮಹಾರಾಷ್ಟ್ರ ಪೊಲೀಸರು ಬೀಡು ಬಿಟ್ಟಿದ್ದು, ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುವ ವಾಹನಗಳನ್ನು ತಪಾಸಣೆ ಮಾಡಿ ಮಹಾರಾಷ್ಟ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಮಹಾರಾಷ್ಟ್ರದ ಆಸ್ಪತ್ರೆಗೆ ತೆರಳಬೇಕಾದರೆ ಕೇವಲ ಮೂರು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಅಲ್ಲದೇ ಗೂಡ್ಸ್ ವಾಹನಗಳನ್ನು ಸಹ ತಪಾಸಣೆ ಮಾಡುತ್ತಿದ್ದಾರೆ.
ಕರ್ನಾಟಕ ಪೊಲೀಸರು ಕೂಡ ಮಹಾರಾಷ್ಟ್ರದಿಂದ ಆಗಮಿಸುವ ಪ್ರತಿಯೊಬ್ಬರಿಗೂ ಕೊರೊನಾ ನೆಗಟಿವ್ ವರದಿ ಇದ್ದರೆ ಮಾತ್ರ ಕರ್ನಾಟಕಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತಿದ್ದಾರೆ. ಗಡಿ ಭಾಗದಲ್ಲಿ ಸಾರ್ವಜನಿಕರು ಹೆಚ್ಚಾಗಿ ಮಹಾರಾಷ್ಟ್ರದ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಆಸ್ಪತ್ರೆಗಳಿಗೆ ತೆರಳಬೇಕಾದರೆ ಕೇವಲ ಮೂರು ಜನರಿಗೆ ಮಾತ್ರ ಮಹಾರಾಷ್ಟ್ರಕ್ಕೆ ಹೋಗಲು ಅವಕಾಶ ನೀಡುತ್ತಿದ್ದಾರೆ.