ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಕನ್ನಡಪರ ಸಂಘಟನೆ ಮುಖಂಡರೊಂದಿಗೆ ನಗರ ಪೊಲೀಸ್ ಆಯುಕ್ತ ಲೋಕೇಶ ಕುಮಾರ್ ತುರ್ತು ಶಾಂತಿ ಸಭೆ ನಡೆಸಿದರು.
ಗಡಿ ವಿಚಾರ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳಲ್ಲಿ ಪರ-ವಿರೋಧ ಪ್ರತಿಭಟನೆಗಳು ನಡೆಯುತ್ತಿರುವ ಕಾರಣ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಕಾರಣಕ್ಕೆ ಕನ್ನಡಪರ ಸಂಘಟನೆ ಮುಖಂಡರೊಂದಿಗೆ ನಗರ ಪೊಲೀಸ್ ಆಯುಕ್ತ ಲೋಕೇಶ ಕುಮಾರ್ ತುರ್ತು ಸಭೆ ನಡೆಸಿದ್ದಾರೆ. ಗಡಿವಿವಾದ ತೀವ್ರ ಸ್ವರೂಪ ಪಡೆಯುತ್ತಿರುವುದರಿಂದ ಸೌಹಾರ್ದ ಮೂಡಿಸುವುದು ಈ ಸಭೆಯ ಉದ್ದೇಶವಾಗಿತ್ತು. ಕರವೇ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆ ಮುಖಂಡರು ಭಾಗಿಯಾಗಿದ್ದರು.