ಬೆಳಗಾವಿ: ಕೇಂದ್ರದ ನೂತನ ಕೃಷಿ ಮಸೂದೆ ಜಾರಿ ವಿರೋಧಿಸಿ ರೈತರು ರೈಲು ತಡೆಗೆ ಮುಂದಾದಾಗ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ರೈತರನ್ನು ಗೇಟ್ ಬಳಿಯೇ ಪೊಲೀಸರು ತಡೆದು ಪ್ರತಿಭಟನೆ ಹತ್ತಿಕ್ಕಲು ಮುಂದಾದರು. ಈ ವೇಳೆ, ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ರೈತರು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಓದಿ: ರೈಲು ತಡೆ ಚಳವಳಿ: ಯಶವಂತಪುರಲ್ಲಿ ಟ್ರೈನ್ ತಡೆದು ರೈತರ ಪ್ರತಿಭಟನೆ
ರೈಲು ತಡೆಗೆ ರೈತರಿಗೆ ಪೊಲೀಸರು ಅವಕಾಶ ನೀಡದಿದ್ದಾಗ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆಗೆ ಮುಂದಾದರು. ನಂತರ ರೈಲ್ವೆ ಪೊಲೀಸರು ಹಾಗೂ ಕ್ಯಾಂಪ್ ಠಾಣೆ ಪೊಲೀಸರು ಜಂಟಿಯಾಗಿ ರೈತರನ್ನು ವಶಕ್ಕೆ ಪಡೆದು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಗೆ ಕರೆದೊಯ್ದು ಬಳಿಕ ಬಿಡುಗಡೆ ಮಾಡಲಾಯಿತು.