ETV Bharat / state

ಪಾಕಿಸ್ತಾನ ಪರ ಘೋಷಣೆ: ಕಾಶ್ಮೀರ ವಿದ್ಯಾರ್ಥಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು - ಹುಬ್ಬಳ್ಳಿ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು

ಪಾಕಿಸ್ತಾನ ಪರ ಘೋಷಣೆ ಕೂಗಿದ ಹುಬ್ಬಳ್ಳಿ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

Police took Kashmir students to an unknown location
ಪಾಕಿಸ್ತಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು
author img

By

Published : Feb 25, 2020, 4:52 PM IST

Updated : Feb 25, 2020, 7:10 PM IST

ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರ ಮೂಲದ ಹುಬ್ಬಳ್ಳಿ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು

ಇಲ್ಲಿನ ಹಿಂಡಲಗಾ ಜೈಲಿನಲ್ಲಿದ್ದ ಅಮೀರ್, ಬಾಸಿತ್, ತಾಲಿಬ್​ನನ್ನು ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದರು. ಮೂರು ಜನ ಆರೋಪಿಗಳ ಆರೋಗ್ಯ ತಪಾಸಣೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಮಾಧ್ಯಮದವರನ್ನ ಕಂಡ ಪೊಲೀಸರು ಆರೋಪಿಗಳನ್ನು ಜೀಪ್​ನಿಂದ ಕೆಳಗಿಳಿಸದೇ ಮತ್ತೆ ವಾಪಸ್ ಅಜ್ಞಾತ ಸ್ಥಳದತ್ತ ಕರೆದೊಯ್ದರು. ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಬಂದೋಬಸ್ತ್ ಇರಲಿಲ್ಲ. ಈ ಹಿನ್ನೆಲೆ ಪೊಲೀಸ್ ಭದ್ರತೆ ಆದ ಬಳಿಕ ಆರೋಪಿಗಳನ್ನ ಕರೆದುಕೊಂಡು ಬರುವ ಸಾಧ್ಯತೆ ಇದೆ.

Last Updated : Feb 25, 2020, 7:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.