ಬೆಳಗಾವಿ: ಇಂದಿನಿಂದ ಪದವಿ ಕಾಲೇಜು ಆರಂಭ ಹಿನ್ನೆಲೆ ಕೋವಿಡ್ ಟೆಸ್ಟ್ ಮಾಡಿಸಲು ಬಡ ವಿದ್ಯಾರ್ಥಿಗಳು, ಪೋಷಕರು ಪರದಾಡುತ್ತಿರುವ ಘಟನೆ ಇಂದು ನಗರದ ಆರ್‌ಪಿಡಿ ಕಾಲೇಜಿನಲ್ಲಿ ಕಂಡು ಬಂದಿದೆ.
ಕೊರೊನಾ ವೈರಸ್ ಪಿಡುಗಿನ ಹಿನ್ನೆಲೆ ಕಳೆದ ಏಂಟು ತಿಂಗಳಿನಿಂದ ಬಂದ್ ಆಗಿದ್ದ ಕಾಲೇಜುಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಇಂದಿನಿಂದ ಆರಂಭಗೊಂಡಿವೆ. ಕಾಲೇಜುಗಳ ಪ್ರವೇಶಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿರುವುದರಿಂದ ಕೆಲ ಬಡ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಕೋವಿಡ್ ಟೆಸ್ಟ್ ಇದ್ದರಷ್ಟೇ ಕಾಲೇಜಿನಲ್ಲಿ ಪ್ರವೇಶ ನೀಡಲಾಗುತ್ತಿದೆ. ಟೆಸ್ಟ್‌ಗೆ ಸಾವಿರಾರು ರೂ. ಹಣ ಕೇಳುತ್ತಿದ್ದಾರೆ. ಇದರಿಂದ ಬಡ ವಿದ್ಯಾರ್ಥಿಗಳೆಲ್ಲರಿಗೂ ಉಚಿತ ಕೋವಿಡ್ ಟೆಸ್ಟ್ ಮಾಡಬೇಕೆಂದು ಪೋಷಕರು ಆಗ್ರಹಿಸಿದರು.
ಇದೇ ವೇಳೆ ಬೆಳಗಾವಿಯ ಆರ್‌ಪಿಡಿ ಕಾಲೇಜಿನ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿನಿ ಪ್ರಿಯಾಂಕಾ ಹೊನ್ನಾವರ, ಕೊರೊನಾ ಟೆಸ್ಟ್ ಮಾಡಿಸಲು ಹಣವಿಲ್ಲದೇ ಪರದಾಡುತ್ತಿದ್ದರು.
ಕೋವಿಡ್ ಟೆಸ್ಟ್‌ಗೆ ಆಸ್ಪತ್ರೆಯವರು ಸಾವಿರಾರು ರೂ. ಹಣ ಕೇಳುತ್ತಿದ್ದಾರೆ. ಇದರಿಂದ ನಮ್ಮಂಥ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಟೆಸ್ಟ್ ಮಾಡಿಸುವ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿಕೊಂಡರು.