ETV Bharat / state

ಪಶು ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಕಟ್ಟಡ ಕಾಮಗಾರಿ ಪರಿಶೀಲಿಸಿದ ಪ್ರಭು ಚೌವ್ಹಾಣ್​​ - athani

140 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಕಟ್ಟಡ ಕಾಮಗಾರಿಯನ್ನು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ ಪರಿಶೀಲನೆ ನಡೆಸಿದರು.

Prabhu Chavhana
ಪ್ರಭು ಚವ್ಹಾಣ
author img

By

Published : Nov 17, 2020, 9:28 PM IST

ಅಥಣಿ: ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಸುಮಾರು 140 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಕಟ್ಟಡ ಕಾಮಗಾರಿಯನ್ನು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ ಪರಿಶೀಲನೆ ನಡೆಸಿದರು.

ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ

ಇದೆ ವೇಳೆ ಸಚಿವರು ಈಟಿವಿ ಭಾರತ ಜೊತೆ ಮಾತನಾಡಿ, ಕೋಕಟನೂರ ಪಶು ವೈದ್ಯಕೀಯ ಮಹಾವಿದ್ಯಾಲಯ ಕಾಲೇಜಿಗೆ 89 ಕೋಟಿ ರೂಪಾಯಿ ಅನುದಾನ ಬೇಕಾಗಿದೆ. ಸಿಎಂ ಬಿ.ಎಸ್​​.ಯಡಿಯೂರಪ್ಪ ಅವರಿಗೆ ಹಣ ಬಿಡುಗಡೆಗೆ ಮನವಿ ಸಲ್ಲಿಸಲಾಗುವುದು. ಪಶು ಇಲಾಖೆಯಲ್ಲಿ 9000 ಸಾವಿರ ವೈದ್ಯರ ಕೊರತೆ ಇರುವುದರಿಂದ ಕೆಲವು ಭಾಗದಲ್ಲಿ ಪಶುಗಳ ಚಿಕಿತ್ಸೆಗೆ ತೊಂದರೆ ಉಂಟಾಗಿದೆ. ಸಿಎಂ ಜೊತೆ ಮಾತನಾಡಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಆರ್.ಶಂಕರ್, ಹೆಚ್.ವಿಶ್ವನಾಥ್​, ಎಂ​ಟಿಬಿ ನಾಗರಾಜ್ ಅವರಿಗೆ ಆದಷ್ಟು ಬೇಗನೆ ಸಚಿವ ಸ್ಥಾನವನ್ನು ಹೈಕಮಾಂಡ್ ನಿರ್ದೇಶನದಂತೆ ನೀಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದರು. ಕೊಕಟನೂರ ಪಶು ಮಹಾವಿದ್ಯಾಲಯ ಕಾಲೇಜಿಗೆ ಸತತ 11 ವರ್ಷಗಳಿಂದ ಕಾಮಗಾರಿ ನಡೆದಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಇರುವುದಕ್ಕೆ ಕಾಲೇಜು ಕಾಮಗಾರಿ ವಿಳಂಬವಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು. ಆದಷ್ಟು ಬೇಗನೆ ಪಶು ಆಸ್ಪತ್ರೆ ಪ್ರಾರಂಭ ಮಾಡಲಾಗುವುದು ಎಂದು ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.