ಬೆಳಗಾವಿ: ಲೋಕಸಭೆ ಉಪಚುನಾವಣೆಗೆ ಈವರೆಗೂ ಯಾವುದೇ ಅಭ್ಯರ್ಥಿಗಳ ಹೆಸರನ್ನು ಶಿಪಾರಸು ಮಾಡಿಲ್ಲ. ಈಗಾಗಲೇ ಐದಾರು ಜನರ ಹೆಸರು ಚಾಲ್ತಿಯಲ್ಲಿವೆ. ಆದರೆ ಯಾವುದೂ ಅಂತಿಮವಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಿನ್ನೆ ನಡೆದ ಸಭೆಯಲ್ಲಿ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಈವರೆಗೂ ಯಾವುದೇ ಅಭ್ಯರ್ಥಿಗಳ ಹೆಸರನ್ನು ಶಿಪಾರಸು ಮಾಡಿಲ್ಲ. ಈಗಾಗಲೇ ಐದಾರು ಜನರ ಹೆಸರು ಕೇಳಿ ಬಂದಿದೆ. ಆದರೆ ಯಾವುದೂ ಅಂತಿಮವಲ್ಲ. ವೈಯಕ್ತಿಕವಾಗಿ ನನಗೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ಪಕ್ಷ ಏನೇ ನಿರ್ಧಾರ ಕೈಗೊಂಡರು ಪಕ್ಷದ ನಿರ್ಣಯಕ್ಕೆ ಬದ್ಧನಾಗಿದ್ದೇನೆ ಎಂದರು.
ಓದಿ: ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಹೆಚ್.ಡಿ.ಕುಮಾರಸ್ವಾಮಿ!
ಕಾಂಗ್ರೆಸ್ನಿಂದ ಪ್ರಕಾಶ್ ಹುಕ್ಕೇರಿ ಟಿಕೆಟ್ ವಿಚಾರ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ನಿಂದ ಬೆಳಗಾವಿ ಲೋಕಸಭೆಗೆ ಪ್ರಕಾಶ್ ಹುಕ್ಕೇರಿ ಟಿಕೆಟ್ ಕೇಳಿದ್ದು ನಿಜ. ಆದರೆ ಅವರ ಹೆಸರನ್ನು ಶಿಪಾರಸು ಮಾಡಿಲ್ಲ. ನಾಳೆ ಧಾರವಾಡದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಚರ್ಚಿಸಿ ಅಂತಿಮ ಮಾಡಲಾಗುವುದು ಎಂದರು.