ಬೆಳಗಾವಿ: ಉಪಚುನಾವಣೆ ಪ್ರಚಾರ ಸಭೆ ಬಳಿಕ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ಮಾಡಿದರು.
ಬೆಳಗಾವಿಯ ಯುಕೆ 27 ಹೋಟೆಲ್ಗೆ ಆಗಮಿಸಿದ ಪ್ರಕಾಶ ಹುಕ್ಕೇರಿ, ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ಪ್ರಕಾಶ ಹುಕ್ಕೇರಿ ಅವರು ಉಪಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಕೊನೆ ಕ್ಷಣದಲ್ಲಿ ಪಕ್ಷ ಟಿಕೆಟ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.
ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹುಕ್ಕೇರಿ, ಉಪಹಾರ ಸೇವಿಸಲು ಹೋಟೆಲ್ಗೆ ಬಂದಿದ್ದೇನೆ. ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯವಾಗಿದೆ. ಈ ಕುರಿತು ಸಿಎಂಗೆ ಮನವಿ ಸಲ್ಲಿಸಲು ಬಂದಿರುವುದಾಗಿ ಹೇಳಿದರು.