ಬೆಳಗಾವಿ : ಕಳೆದ ವಿಧಾನಸಭಾ ಚುನಾವಣೆಯಿಂದಲೂ ಕಾಗವಾಡ ಮತಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗಬಹುದು ಎನ್ನುವ ನಿರೀಕ್ಷೆ ಹೊಂದಿದ್ದರು. ಆದರೆ ಮತ್ತೆ ಅವರಿಗೆ ನಿರಾಸೆಯಾಗಿದೆ.
ಅಚ್ಚರಿಯ ಬೆಳವಣಿಗೆಯಲ್ಲಿ ಪ್ರಕಾಶ್ ಹುಕ್ಕೇರಿ ಚುನಾವಣಾ ಕಣದಿಂದ ದೂರ ಸರಿದಿದ್ದು, ಕಾಂಗ್ರೆಸ್ ಪಕ್ಷ ರಾಜು ಕಾಗೆಗೆ ಕಾಗವಾಡ ಕ್ಷೇತ್ರದಲ್ಲಿ ಮಣೆ ಹಾಕಿದೆ. ನಿನ್ನೆ ತಡರಾತ್ರಿ ಪ್ರಕಟಗೊಂಡ ಅಭ್ಯರ್ಥಿಗಳ ಪಟ್ಟಿಯಲ್ಲಿ, ರಾಜು ಕಾಗೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಅಥಣಿ ಕ್ಷೇತ್ರದಲ್ಲಿ ಉದ್ಯಮಿ ಗಜಾನನ ಮಂಗಸೂಳಿ ಎಂಬ ಹೊಸ ಮುಖಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಿಜೆಪಿಯಿಂದ ನಾಲ್ಕು ಬಾರಿ ಶಾಸಕರಾಗಿದ್ದ ರಾಜು ಕಾಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರಿದ್ದಾರೆ. ಕ್ಷೇತ್ರದಲ್ಲಿ ಅವರು ತಮ್ಮದೇ ಆದ ಕಾರ್ಯಕರ್ತರ ಪಡೆ ಹೊಂದಿರುವುದರಿಂದ ರಾಜು ಕಾಗೆ ಅವರಿಗೆ ಟಿಕೆಟ್ ನೀಡಲಾಗಿದೆ ಎನ್ನಲಾಗದೆ.