ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿರುವವರೇ ಸ್ವಪಕ್ಷೀಯರ ಕಾಲನ್ನ ಎಳೆಯೋದು ನಿಲ್ಲಬೇಕು. ಆ ಮೂಲಕ ರಾಜ್ಯದಲ್ಲಿರುವ ಲಿಂಗಾಯತ ನಾಯಕರು ಒಗ್ಗಟ್ಟಾದ್ರೆ ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಗನೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತ ನಾಯಕರು ಮೊದಲು ಒಂದಾಗಬೇಕು. ಒಬ್ಬರ ಕಾಲನ್ನು ಮತ್ತೊಬ್ಬರು ಎಳೆಯುವುದನ್ನು ನಿಲ್ಲಿಸಬೇಕು. ಎಲ್ಲ ಲಿಂಗಾಯತ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸಿದ್ರೆ, 2023ರಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.
ನಂತರ ಮುಂದುವರೆದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ನಮ್ಮೊಳಗಡೆಯೇ ಕಾಲು ಎಳೆಯುವವರ ಸಂಖ್ಯೆ ಹೆಚ್ಚಾಗಿದೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನೇ ಸೋಲಿಸಲು ಓಡಾಡುತ್ತಾರೆ. ಅದನ್ನು ನಿಲ್ಲಿಸಬೇಕು. ಆಗ ಮಾತ್ರ 2023ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಪರೋಕ್ಷವಾಗಿ ತಮ್ಮ ನಾಯಕರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಓದಿ: ಲಾಕ್ಡೌನ್ ಎಫೆಕ್ಟ್ : ಮಕ್ಕಳಿಗೆ ತಡವಾಗಿ ಸಿಗಲಿದೆ ಶಾಲಾ ಸಮವಸ್ತ್ರ