ETV Bharat / state

'ಸಿಎಂ - ರಾಷ್ಟ್ರೀಯ ನಾಯಕರು ಸಂಪುಟ ವಿಸ್ತರಣೆ ತೀರ್ಮಾನ ಮಾಡ್ತಾರೆ.. ನಾನು‌ ರಾಷ್ಟ್ರೀಯ ನಾಯಕನಲ್ಲ' - ಸಂಪುಟ ವಿಸ್ತರಣೆ ಲೇಟೆಸ್ಟ್ ನ್ಯೂಸ್

ಭಾನುವಾರ ಸಂಪುಟ ವಿಸ್ತರಣೆ ‌ಬಗ್ಗೆ ನನಗೆ‌ ಯಾವುದೇ ಮಾಹಿತಿ ಇಲ್ಲ. ಸಿಎಂ ಹೇಳಿದ್ದಾರೆ ಅಂದ್ರೆ ಯೋಜನೆ ಮಾಡಿ ಹೇಳಿರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

pralhad joshi talks about cabinet expansion
ಪ್ರಹ್ಲಾದ ಜೋಶಿ, ಕೇಂದ್ರ ಸಚಿವ
author img

By

Published : Dec 5, 2020, 12:28 AM IST

ಬೆಳಗಾವಿ: ಸಂಪುಟ ವಿಸ್ತರಣೆ ಕುರಿತಂತೆ ನನಗೆ ಯಾವುದೇ ಮಾಹಿತಿ ಇಲ್ಲ. ಈ‌ ಬಗ್ಗೆ ರಾಷ್ಟ್ರೀಯ ನಾಯಕರು ಹಾಗೂ ಸಿಎಂ ಬಿಎಸ್​ವೈ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಘಟನಾತ್ಮಕ ವಿಚಾರಗಳೊಂದಿಗೆ ಗ್ರಾಮ ಪಂಚಾಯತ್ ಚುನಾವಣೆ ಮತ್ತು ಲೋಕಸಭೆ ಉಪಚುನಾವಣೆ ಬಗ್ಗೆ ಬೇರು‌ ಮಟ್ಟದಿಂದ ಬಲ ಪಡಿಸುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಅಣಿಗೊಳಿಸುವ ಅಜೆಂಡಾ ಇಟ್ಟುಕೊಳ್ಳಲಾಗಿದೆ ಎಂದರು.

ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಭಾನುವಾರ ಸಂಪುಟ ವಿಸ್ತರಣೆ ‌ಬಗ್ಗೆ ನನಗೆ‌ ಯಾವುದೇ ಮಾಹಿತಿ ಇಲ್ಲ. ಸಿಎಂ ಹೇಳಿದ್ದಾರೆ ಅಂದ್ರೆ ಯೋಜನೆ ಮಾಡಿ ಹೇಳಿರಬಹುದು. ಆದ್ರೆ, ಅದರ ಬಗ್ಗೆ ನನಗೆ ಗೊತ್ತಿಲ್ಲ. ನಾನು‌ ರಾಷ್ಟ್ರೀಯ ನಾಯಕನಲ್ಲ. ಸಿಎಂ ಮತ್ತು ನಮ್ಮ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡಿ ಹೇಳುತ್ತಾರೆ. ಲವ್ ಜೀಹಾದ್, ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾನೂನಾತ್ಮಕವಾಗಿ ಮಾಡುವ ಅಗತ್ಯವಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.