ETV Bharat / state

ಚಿತ್ರದುರ್ಗ ಎಸ್ಸಿ ಎಸ್ಟಿ ಸಮಾವೇಶಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಪೂರ್ವಭಾವಿ ಸಭೆ - ETv Bharat kannada news

ಚಿತ್ರದುರ್ಗದಲ್ಲಿ ನಡೆಯಲಿರುವ ಎಸ್ಸಿ ಎಸ್ಟಿ ಸಮಾವೇಶದ ಕಾಂಗ್ರೆಸ್ ನಾಯಕರ ಪೂರ್ವಭಾವಿ ಸಭೆ ಬೆಳಗಾವಿಯಲ್ಲಿ ನಡೆಯಲಿದೆ.

congress
ಕಾಂಗ್ರೆಸ್
author img

By

Published : Dec 20, 2022, 6:11 PM IST

ಬೆಳಗಾವಿ : ಚಿತ್ರದುರ್ಗದಲ್ಲಿ ನಡೆಯಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶ ಕುರಿತ ಕಾಂಗ್ರೆಸ್ ನಾಯಕರ ಪೂರ್ವ ಸಿದ್ಧತಾ ಸಭೆ ಡಿಸೆಂಬರ್ 22ರಂದು ಬೆಳಗಾವಿಯಲ್ಲಿ ನಡೆಯಲಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬೃಹತ್ ಸಮಾವೇಶವನ್ನು ಚಿತ್ರದುರ್ಗದಲ್ಲಿ ಜನವರಿ 8ರಂದು ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಚರ್ಚಿಸಲು ಈ ಸಭೆ ಕರೆಯಲಾಗಿದೆ.

ಗುರುವಾರ ಸಂಜೆ 6.30ಕ್ಕೆ ಬೆಳಗಾವಿಯ ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ “ಫೇರ್‌ಫೀಲ್ಡ್ ಮ್ಯಾರಿಯಟ್ ಹೋಟೆಲ್"ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ಎ.ಐ.ಸಿ.ಸಿ.ಯ ಸಿ.ಡಬ್ಲ್ಯೂಸಿ, ಖಾಯಂ ಅಹ್ವಾನಿತರಾದ ಕೆ.ಹೆಚ್. ಮುನಿಯಪ್ಪ, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಇನ್ನಿತರ ಫರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಾಯಕರು ಪಾಲ್ಗೊಳ್ಳಲಿದ್ದಾರೆ.

Preparatory meeting of Congress leaders in Belgaum for Chitradurga SC ST convention
ಚಿತ್ರದುರ್ಗ ಎಸ್ಸಿ ಎಸ್ಟಿ ಸಮಾವೇಶಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಪೂರ್ವಭಾವಿ ಸಭೆ

ಈ ಸಭೆಯಲ್ಲ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ್ ಸಭೆಯಲ್ಲಿ ಉಪಸ್ಥಿತರಿರುತ್ತಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಶಾಸಕರು ವಿಧಾನ ಪರಿಷತ್ ಸದಸ್ಯರು ಲೋಕಸಭೆ ಸದಸ್ಯರು ರಾಜ್ಯಸಭೆ ಸದಸ್ಯರು ಹಾಗೂ ಬಾಹ್ಯ ಬೆಂಬಲ ನೀಡಿರುವ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸಕೋಟೆ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.