ETV Bharat / state

ಕೋವಿಡ್ 3ನೇ ಅಲೆಯಿಂದ ಮಕ್ಕಳ ರಕ್ಷಣೆಗೆ ಎಲ್ಲಾ ಸಿದ್ಧತೆಯಾಗಿದೆ : ಸಚಿವೆ ಶಶಿಕಲಾ ಜೊಲ್ಲೆ - ಬೆಳಗಾವಿ ಸುದ್ದಿ

ಎರಡು ಮತ್ತು 3ನೇ ಅಲೆಯಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ವೈದ್ಯಕೀಯ ಮತ್ತು ಊಟೋಪಚಾರದ ಸೌಕರ್ಯಗಳನ್ನು ಒದಗಿಸಲಾಗುವುದು. ಕೋವಿಡ್ ಸೋಂಕಿತ ಮಕ್ಕಳ ಆರೈಕೆಗಾಗಿ ಸುಸಜ್ಜಿತ ಮತ್ತು ಪ್ರತ್ಯೇಕ ಕೋವಿಡ್ ಕೇರ್ ಕೇಂದ್ರಗಳನ್ನು ಇಲಾಖೆಯ ವತಿಯಿಂದ ಆರಂಭಿಸಲಾಗುತ್ತಿದೆ..

Shashikala jolle
ಸಚಿವೆ ಶಶಿಕಲಾ ಜೊಲ್ಲೆ
author img

By

Published : Jun 23, 2021, 10:26 PM IST

ಬೆಳಗಾವಿ : ಸಂಭವನೀಯ ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಔಷಧಿ, ವೈದ್ಯಕೀಯ ಸಾಮಗ್ರಿಗಳು ಸೇರಿ ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಕ್ಕಳ ಆರೈಕೆಗೆ ಸುಸಜ್ಜಿತ ಕೇಂದ್ರ

ಎರಡು ಮತ್ತು 3ನೇ ಅಲೆಯಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ವೈದ್ಯಕೀಯ ಮತ್ತು ಊಟೋಪಚಾರದ ಸೌಕರ್ಯಗಳನ್ನು ಒದಗಿಸಲಾಗುವುದು. ಕೋವಿಡ್ ಸೋಂಕಿತ ಮಕ್ಕಳ ಆರೈಕೆಗಾಗಿ ಸುಸಜ್ಜಿತ ಮತ್ತು ಪ್ರತ್ಯೇಕ ಕೋವಿಡ್ ಕೇರ್ ಕೇಂದ್ರಗಳನ್ನು ಇಲಾಖೆಯ ವತಿಯಿಂದ ಆರಂಭಿಸಲಾಗುತ್ತಿದೆ ಎಂದರು.

2ನೇ ಅಲೆಯಲ್ಲಿ ರಾಜ್ಯದ ಒಟ್ಟು 52 ಬಡ ಹಾಗೂ ಮಧ್ಯಮ ವರ್ಗದ ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಇಂತಹ ಮಕ್ಕಳ ಪೋಷಣೆ ಜವಾಬ್ದಾರಿಯನ್ನು ಇಲಾಖೆ ತೆಗೆದುಕೊಂಡಿರುತ್ತದೆ. ಮುಖ್ಯಮಂತ್ರಿಗಳ ಬಾಲಸೇವಾ ಯೋಜನೆಯಡಿ ಈ ಮಕ್ಕಳಿಗೆ ಪ್ರತಿ ತಿಂಗಳು ಮೂರುವರೆ ಸಾವಿರ ರೂಪಾಯಿ, ಉಚಿತ ಶಿಕ್ಷಣ, ಹೆಣ್ಣು ಮಗುವಿದ್ದರೆ 18 ವರ್ಷದ ಬಳಿಕ 1 ಲಕ್ಷ ರೂಪಾಯಿ ‌ಆರ್ಥಿಕ ನೆರವಿಗೆ ನಿರ್ಧರಿಸಲಾಗಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.