ETV Bharat / state

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕೇಳಿಬರ್ತಿದೆ ಘಟಾನುಘಟಿಗಳ ಹೆಸರು

ಕೇಂದ್ರ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆ ಆಗಿಲ್ಲ. ಆದ್ರೆ, ಪಕ್ಷಗಳು ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವಲ್ಲಿ ನಿರತವಾಗಿದೆ.

preparation for by-election of Belgaum Lok Sabha constituency
ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಘಟಾನುಘಟಿಗಳ ಹೆಸರು...ಕಾರ್ಯತಂತ್ರ ರೂಪಿಸುತ್ತಿರುವ ಪಕ್ಷ
author img

By

Published : Dec 9, 2020, 2:18 PM IST

ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆ ಆಗಿಲ್ಲ. ಆದ್ರೆ, ಬಿಜೆಪಿಯಲ್ಲಿ ಮಾತ್ರ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಾ ಹೋಗುತ್ತಿದೆ. ಇದರಿಂದ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡ್ರೆ ಅದರ ಲಾಭ ಪಡೆದುಕೊಳ್ಳಲು ಕಾಂಗ್ರೆಸ್ ಪಕ್ಷ ಮುಂದಾಗಿದೆ.

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಕಾರ್ಯತಂತ್ರ ರೂಪಿಸುತ್ತಿರುವ ಪಕ್ಷಗಳು

ಗೆಲವು ಸಾಧಿಸಲೇಬೇಕೆಂಬ ನಿಟ್ಟಿನಲ್ಲಿ ಕಾಂಗ್ರೆಸ್​ನ ಡಿಕೆ ಶಿವಕುಮಾರ್​​, ಎಂ.ಬಿ.ಪಾಟೀಲ ನೇತೃತ್ವದಲ್ಲಿ 11 ಸದಸ್ಯರ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ. ಒಂದು ಸಭೆ ಬೆಳಗಾವಿಯಲ್ಲಿ ಮತ್ತೊಂದು ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿದ್ದು, ಬೆಳಗಾವಿ ಬೈ ಎಲೆಕ್ಷನ್​​ಗೆ ಅಭ್ಯರ್ಥಿ ವಿಚಾರದಲ್ಲಿನ ಗೊಂದಲ ಮುಂದುವರೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಇಬ್ಬರ ಪ್ರಭಾವಿ ನಾಯಕರ ಹೆಸರಿಗೆ ಮತ್ತೊಬ್ಬರು ಸೇರಿಕೊಂಡಿದ್ದಾರೆ. ಆ ಪೈಕಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​​ ಜಾರಕಿಹೊಳಿ, ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಇದೀಗ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಹೆಸರು ಬೈಎಲೆಕ್ಷನ್‌ ಅಭ್ಯರ್ಥಿಯಾಗಿ ಪ್ರಸ್ತಾಪವಾಗಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ತನ್ನ ಅಭ್ಯರ್ಥಿ ಹೆಸರನ್ನು ಘೋಷಿಸುವವರೆಗೂ ತನ್ನ ಪಕ್ಷದ ಅಭ್ಯರ್ಥಿಯ ಹೆಸರು ಬಹಿರಂಗ ಪಡಿಸುವುದಿಲ್ಲ ಎಂಬ ಮಾತುಗಳು ಜೋರಾಗಿಯೇ ಕೇಳಿಬರುತ್ತಿದೆ. ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದನ್ನು ಸೂಕ್ಷವಾಗಿ ಗಮನಿಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಗೆಲ್ಲಲು ಬೇಕಾದ ಎಲ್ಲಾ ತಯಾರಿ ನಡೆಸಿದ್ದಾರೆ.

ಈಗಾಗಲೇ ಒಂದು ಸುತ್ತಿನ ಸಭೆ ಎಂ.ಬಿ ಪಾಟೀಲ್ ನೇತೃತ್ವದಲ್ಲಿ ನಡೆದಿದ್ದು, ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಮೂವರು ಶಾಸಕರ ಹೆಸರನ್ನು ಕಾರ್ಯಕರ್ತರು ಪ್ರಸ್ತಾಪ ಮಾಡಿದ್ದು, ಸಭೆಯಲ್ಲಿ ಯಾವ ನಿರ್ಣಯ ಕೈಗೊಳ್ಳಲಾಗಿದೆ ಎಂಬ ವಿಚಾರವನ್ನು ಬಿಟ್ಟುಕೊಟ್ಟಿಲ್ಲ.

ಓದಿ: ಬೆಳಗಾವಿ ಉಪಚುನಾವಣೆ ಘೋಷಣೆಗೂ ಮೊದಲೇ ಅಭ್ಯರ್ಥಿ ಘೋಷಿಸಿದ ಎನ್‌ಸಿಪಿ!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊನೆ ಗಳಿಗೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅಥವಾ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿಗೆ ಟಿಕೆಟ್ ನೀಡಬೇಕೆಂಬ ಯೋಜನೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂವರು ಶಾಸಕರ ಪೈಕಿ ಯಾರಿಗೇ ಅವಕಾಶ ನೀಡಿದ್ರೂ ಕೂಡ ನಾವು ಕೆಲಸ ಮಾಡಲು ಸಿದ್ಧ ಎನ್ನುತ್ತಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರು. ಈ ನಿಟ್ಟಿನಲ್ಲಿ ಇನ್ನೂ ಒಂದು ಸಭೆಯನ್ನು ಮಾಡಿ ಸೂಕ್ತ ಅಭ್ಯರ್ಥಿಯನ್ನು ಆರಿಸುತ್ತೇವೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ತಿಳಿಸಿದ್ದಾರೆ.

ಓದಿ: ಬೆಳಗಾವಿ ಲೋಕಸಭೆ ಉಪಚುನಾವಣೆ: ಕೈ ಅಭ್ಯರ್ಥಿಯಾಗಲಿದ್ದರಾ ಸತೀಶ್ ಜಾರಕಿಹೊಳಿ?

ಇತ್ತ ಜೆಡಿಎಸ್ ಮಾತ್ರ ಇನ್ನೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಮೊನ್ನೆಯಷ್ಟೇ ಒಂದು ಸಭೆಯನ್ನು ಜೆಡಿಎಸ್ ವರಿಷ್ಠರು ಬೆಂಗಳೂರಿನಲ್ಲಿ ಮಾಡಿದ್ದಾರೆ. ಜೆಡಿಎಸ್​​ನಿಂದಲೂ ಕೂಡ ಟಿಕೆಟ್ ಆಕಾಂಕ್ಷಿಗಳು ಸಾಕಷ್ಟಿದ್ದು ವರಿಷ್ಠರು ಈ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.