ETV Bharat / state

ಬೆಳಗಾವಿ ‘ಲೋಕ’ ಗೆಲ್ಲಲು ಪಕ್ಷಗಳಿಂದ ತಯಾರಿ.. ಚುನಾವಣಾ ಕಣದಲ್ಲಿ ಟಿಕೆಟ್ ಲಾಬಿ..

ಬೆಳಗಾವಿಯ ವಿಜಯ ಆಸ್ಪತ್ರೆಯ ಮುಖ್ಯಸ್ಥ ಡಾ.ರವಿ ಪಾಟೀಲ ಹಾಗೂ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಕೂಡ ಟಿಕೆಟ್‍ಗೆ ಲಾಬಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೂಲಕ ಡಾ.ವಿಶ್ವನಾಥ ಪಾಟೀಲ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಮೂಲಕ ಡಾ.ರವಿ ಪಾಟೀಲ ಟಿಕೆಟ್‍ಗಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನುವ ಮಾತು ಹರಿದಾಡುತ್ತಿವೆ..

Belagavi lokh sabha elelction
ಬೆಳಗಾವಿ ಲೋಕಸಭೆ ಚುನಾವಣೆ
author img

By

Published : Feb 9, 2021, 8:33 PM IST

ಬೆಳಗಾವಿ : ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ಚುನಾವಣೆ ಆಯೋಗದ ಮುಖ್ಯ ಆಯುಕ್ತ ಡಾ. ಸಂಜೀವ್‍ಕುಮಾರ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚುನಾವಣೆಯ ಅಂತಿಮ ಸಿದ್ಧತೆ ಪರಿಶೀಲಿಸಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಚುನಾವಣೆ ಘೋಷಣೆ ಆಗಲಿದ್ದು, ಕಾಂಗ್ರೆಸ್-ಬಿಜೆಪಿಯಲ್ಲಿ ಆಕಾಂಕ್ಷಿಗಳು ಟಿಕೆಟ್‍ಗಾಗಿ ಕಸರತ್ತು ತೀವ್ರಗೊಂಡಿದೆ.

ಬಿಜೆಪಿ ಅಭ್ಯರ್ಥಿ ಆಗ್ತಾರಾ ಡಾ. ಗಿರೀಶ ಸೋನವಾಲ್ಕರ್: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್‌ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಉಪಾಚುನಾವಣೆ ನಡೆಯಲಿದೆ. ಬಿಜೆಪಿ ಪಾಳೆಯದಲ್ಲಿ ಆಕಾಂಕ್ಷಿಗಳ ಪಟ್ಟಿ ವಿಸ್ತಾರವಾಗುತ್ತಲೇ ಇದೆ.

ಸಿಎಂ, ಮಂತ್ರಿಗಳು, ಆರ್​​​​ಎಸ್​ಎಸ್​​ ಮುಖಂಡರು ಹೀಗೆ ಎಲ್ಲ ನಾಯಕರನ್ನು ಭೇಟಿಯಾಗುತ್ತಿರುವ ಆಕಾಂಕ್ಷಿಗಳು ಟಿಕೆಟ್‍ಗಾಗಿ ಬೇಡಿಕೆ ಇಡುತ್ತಿದ್ದಾರೆ. ಇತ್ತ ಸುರೇಶ್ ಅಂಗಡಿ ಪುತ್ರಿಯೂ ಆಗಿರುವ ಸಚಿವ ಜಗದೀಶ್ ಶೆಟ್ಟರ್ ಸೊಸೆಯೂ ಆದ ಶ್ರದ್ಧಾ ಶೆಟ್ಟರ್ ಕೂಡ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಬಿಜೆಪಿ ಹೊಸಮುಖಕ್ಕೆ ತಲಾಷ್ ನಡೆಸಿದೆ ಎನ್ನುವ ಮಾತುಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Dr. Girish Sonavalkar
ಡಾ. ಗಿರೀಶ ಸೋನವಾಲ್ಕರ್

ಆರ್​ಎಸ್‍ಎಸ್ ಹಾಗೂ ಬಿಜೆಪಿ ಹೈಕಮಾಂಡ್ ಜೊತೆಗೆ ಒಳ್ಳೆಯ ಸಂಬಂಧ ಹೊಂದಿರುವ ಬೆಳಗಾವಿಯ ಪ್ರತಿಷ್ಠಿತ ಲೇಕ್‍ವ್ಯೂ ಆಸ್ಪತ್ರೆಯ ಮುಖ್ಯಸ್ಥ ಡಾ.ಗಿರೀಶ ಸೋನವಾಲ್ಕರ್ ಬಿಜೆಪಿಯ ಅಭ್ಯರ್ಥಿ ಆಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ.

ಬಿಜೆಪಿ ಟಿಕೆಟ್‍ನ ಪ್ರಬಲ ಆಕಾಂಕ್ಷಿ ಆಗಿರುವ ಡಾ. ಸೋನವಾಲ್ಕರ್ ಇತ್ತೀಚೆಗೆ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿ ಬಂದಿದ್ದಾರೆ.

ಅಲ್ಲದೇ ಕೆಲದಿನಗಳ ಹಿಂದೆ ರಾಜ್ಯಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಡಾ.ಸೋನವಾಲ್ಕರ್ ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

Dr. Girish Sonavalkar
ಡಿಸಿಎಂ ಅಶ್ವತ್ಥ್ ನಾರಾಯಣ್ ಜೊತೆ ಡಾ. ಗಿರೀಶ ಸೋನವಾಲ್ಕರ್

ಗೋವಾ ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬಿಜೆಪಿ ಹಾಗೂ ಆರ್​​​ಎಸ್‍ಎಸ್ ನಾಯಕರಿಂದ ಡಾ. ಸೋನವಾಲ್ಕರ್ ಅವರಿಗೆ ಸಕಾರಾತ್ಮಕ ಸ್ಪಂದನೆಯೂ ಸಿಕ್ಕಿದೆ. ಎರಡು ದಶಕಗಳ ಕಾಲ ವೈದ್ಯಕೀಯ ಸೇವೆ ಮೂಲಕ ಚಿರಪರಿಚಿತರಾಗಿರುವ ಡಾ.ಸೋನವಾಲ್ಕರ್​​ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ.

Dr. Girish Sonavalkar
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಜೊತೆ ಡಾ. ಸೋನವಾಲ್ಕರ್

ಅಲ್ಲದೇ ಹಲವು ವರ್ಷಗಳಿಂದ ಆರ್​​​​ಎಸ್‍ಎಸ್​​​ನಲ್ಲಿಯೂ ಸಕ್ರಿಯರಾಗಿದ್ದಾರೆ. ಹೀಗಾಗಿ, ಡಾ.ಗಿರೀಶ ಸೋನವಾಲ್ಕರ್ ಅವರೇ ಬಿಜೆಪಿಯ ಅಚ್ಚರಿಯ ಅಭ್ಯರ್ಥಿ ಆಗಬಹುದು ಎಂಬ ಚರ್ಚೆಗಳು ತೀವ್ರಗೊಂಡಿವೆ.

ಮತ್ತಿಬ್ಬರು ವೈದ್ಯರ ಲಾಬಿ : ಬೆಳಗಾವಿಯ ವಿಜಯ ಆಸ್ಪತ್ರೆಯ ಮುಖ್ಯಸ್ಥ ಡಾ.ರವಿ ಪಾಟೀಲ ಹಾಗೂ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಕೂಡ ಟಿಕೆಟ್‍ಗೆ ಲಾಬಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೂಲಕ ಡಾ.ವಿಶ್ವನಾಥ ಪಾಟೀಲ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಮೂಲಕ ಡಾ.ರವಿ ಪಾಟೀಲ ಟಿಕೆಟ್‍ಗಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನುವ ಮಾತು ಹರಿದಾಡುತ್ತಿವೆ.

ಉಳಿದಂತೆ ಎನ್‍ಆರ್​​ಐ ಕೋಟಾದಡಿ ಅಮೆರಿಕದಲ್ಲಿ ನೆಲೆಸಿರುವ ಭಾರತದ ಪ್ರಜೆ ಸೂರ್ಯಕಾಂತ ಸಂತ್ರಿ, ಸಚಿವ ಉಮೇಶ ಕತ್ತಿ ಸಹೋದರ ರಮೇಶ ಕತ್ತಿಯೂ ಟಿಕೆಟ್‍ಗಾಗಿ ಲಾಬಿ ನಡೆಸುತ್ತಿದ್ದಾರೆ. ಉಳಿದಂತೆ ಜಿಲ್ಲಾ ಬಿಜೆಪಿಯ ಕಾರ್ಯಕರ್ತರು ನಮ್ಮನ್ನೂ ಪರಿಗಣಿಸಿ ಎಂದು ಬೇಡಿಕೆ ಇಡುತ್ತಿದ್ದಾರೆ. ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುವುದೇ ಕುತೂಹಲ ಮೂಡಿಸಿದೆ.

ಕಾಂಗ್ರೆಸ್‍ನಲ್ಲಿ ಮೂವರು ಹೆಸರು ಅಂತಿಮ : ಉಪಚುನಾವಣೆಯನ್ನು ಕಾಂಗ್ರೆಸ್ ಕೂಡ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಮೂವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಕೆಪಿಸಿಸಿ ಎಐಸಿಸಿಗೆ ಕಳುಹಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಶಾಸಕ ಅನಿಲ್ ಲಾಡ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಹೆಸರನ್ನು ಅಂತಿಮಗೊಳಿಸಿದೆ. ಹೈಕಮಾಂಡ್ ಹೇಳಿದ್ರೆ ಚುನಾವಣೆಗೆ ಸ್ಪರ್ಧಿಸುವುದಾಗಿ ಈಗಾಗಲೇ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಗುರುಪೀಠ ಅಭಿವೃದ್ಧಿಗೆ 10.8 ಕೋಟಿ ಅನುದಾನ ಬಿಡುಗಡೆ: ಸಿಎಂ ಬಿಎಸ್​ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.