ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಒಗ್ಗಟ್ಟಿನಿಂದ ಇದ್ದೇವೆ ಎಂದು ತೋರ್ಪಡಿಸಲು ಸಚಿವ ಸತೀಶ ಜಾರಕಿಹೊಳಿ ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದರು.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತು ಆರಂಭಿಸಿದ ಸಚಿವ ಸತೀಶ ಜಾರಕಿಹೊಳಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಒಂದಾಗಿ ದುಡಿಯುತ್ತೇವೆ ಎಂದು ಹೇಳಿದರು. ಆದರೆ ಸಚಿವ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿದ್ದರೂ ಅಕ್ಕಪಕ್ಕದಲ್ಲೇ ಕುಳಿತಿದ್ದರೂ ಪರಸ್ಪರರು ಮುಖ ನೋಡಲಿಲ್ಲ, ಮಾತನಾಡಲೂ ಇಲ್ಲ. ಒಗ್ಗಟ್ಟು ಜಪಿಸಲು ತಾವೇ ಕರೆದ ಸುದ್ದಿಗೋಷ್ಠಿಯಲ್ಲಿ ಭಿನ್ನಮತ ಕಾಣಿಸಿಕೊಂಡಿತು.
ಇನ್ನೂ ಸುದ್ದಿಗೊಷ್ಠಿಯಲ್ಲಿ ಹೆಬ್ಬಾಳ್ಕರ್ಗೆ ಮಾತನಾಡಲು ಅವಕಾಶ ಸಿಗದೇ ಇರುವುದು ಕುತೂಹಲಕ್ಕೆ ಕಾರಣವಾಯಿತು. ಹೀಗಾಗಿ ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುವುದು ಮತ್ತೊಮ್ಮೆ ಬಹಿರಂಗಗೊಂಡಿತು.