ETV Bharat / state

ಕಡ್ಡಾಯ ವರ್ಗಾವಣೆಗೆ ವಿರೋಧ: ಶಿಕ್ಷಕರ ಉಪವಾಸ ಸತ್ಯಾಗ್ರಹ - ಬೆಳಗಾವಿ

ಸತತ ಹತ್ತು ವರ್ಷಗಳಿಂದ ಎ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕ ಮತ್ತು ಅಮಾನವೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಡ್ಡಾಯ ವರ್ಗಾವಣೆ ವಿರೋಧಿಸಿ ಶಿಕ್ಷಕರ ಉಪವಾಸ ಸತ್ಯಾಗ್ರಹ
author img

By

Published : Jul 23, 2019, 5:01 PM IST

Updated : Jul 23, 2019, 8:14 PM IST

ಬೆಳಗಾವಿ: ಎ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

ನಗರದ ಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿ ಮುಂದೆ ನೆರೆದ ನೂರಾರು ಶಿಕ್ಷಕ, ಶಿಕ್ಷಕಿಯರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸತತ ಹತ್ತು ವರ್ಷಗಳಿಂದ ಎ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕ ಮತ್ತು ಅಮಾನವೀಯವಾಗಿದೆ ಎಂದು ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

ಕಡ್ಡಾಯ ವರ್ಗಾವಣೆ ವಿರೋಧಿಸಿ ಶಿಕ್ಷಕರ ಉಪವಾಸ ಸತ್ಯಾಗ್ರಹ

ಎ ವಲಯದಲ್ಲಿ ನೌಕರಿ ಮಾಡಬೇಕೆಂದರೆ ತುಂಬಾ ಕಷ್ಟ ಅನುಭವಿಸಬೇಕು. ಇಷ್ಟಾದರೂ ನಮ್ಮನ್ನು ವರ್ಗಾವಣೆ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

Intro:ಕಡ್ಡಾಯ ವರ್ಗಾವಣೆ ವಿರೋಧಿಸಿ ಪ್ರಾಥಮಿಕ ಶಿಕ್ಷಕರ ಉಪವಾಸ ಸತ್ಯಾಗ್ರಹ

ಬೆಳಗಾವಿ : ಎ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ಧುಗೊಳಿಸುವಂತೆ ಆಗ್ರಹಿಸಿ, ರಾಜ್ಯಾಧ್ಯಂತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು. ಬೆಳಗಾವಿ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.

Body:ನಗರದ ಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಕುಳಿತುಕೊಂಡು ನೂರಾರು ಶಿಕ್ಷಕ, ಶಿಕ್ಷಕಿಯರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಸತತ ಹತ್ತು ವರ್ಷಗಳಿಂದ ಎ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕ ಮತ್ತು ಅಮಾನವೀಯವಾಗಿದೆ. ಆದ್ದರಿಂದ ಕೂಡಲೇ ಈ ಪ್ರಕ್ರಿಯೆ ಕೈಬಿಟ್ಟು ಕೋರಿಕೆ ಮೇರೆಗೆ ವರ್ಗಾವಣೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Conclusion:ಎ ವಲಯದಲ್ಲಿ ನೌಕರಿ ಮಾಡಬೇಕೆಂದರೆ ಒಂದು ಗಂಡನನ್ನು ಕಳೆದುಕೊಳ್ಳಬೇಕು. ಇಲ್ಲವೇ ಜೀವನ ಪರ್ಯಂತ ಮಹಿಳೆ ಮದುವೆ ಆಗದೇ ಕುಮಾರಿ ಆಗಿರಬೇಕು. ಅಲ್ಲದೇ ಸರ್ಕಾರಿ ನೌಕರಿ ಇಲ್ಲದ ಗಂಡ ಅಥವಾ ಹೆಂಡತಿ ಆದ ತಾವು ಪತಿ ಪತ್ನಿಯರು ಅಲ್ಲವೇ ನಮಗೂ ನೋವು ಕಷ್ಟ ಇಲ್ಲವೇ ಎಂದು ತಮ್ಮ ಅಳಲು ತೋಡಿಕೊಂಡರು.

ವಿನಾಯಕ ಮಠಪತಿ
ಬೆಳಗಾವಿ

Last Updated : Jul 23, 2019, 8:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.