ETV Bharat / state

ಫೆ.27ರಂದು ಬೆಳಗಾವಿಗೆ ಪ್ರಧಾನಿ ಮೋದಿ: ಕುಂದಾನಗರಿಯಲ್ಲಿ ಭರದ ಸಿದ್ಧತೆ - ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣ

ಮೋದಿ ಆಗಮನದ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪೂರ್ವ ಸಿದ್ಧತೆ ನಡೆಯುತ್ತಿದೆ.

Modi s arrival, pre-preparation review in Belagavi
ಮೋದಿ ಆಗಮನ ಹಿನ್ನೆಲೆ ಕುಂದಾನಗರಿಯಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ
author img

By

Published : Feb 22, 2023, 9:55 PM IST

Updated : Feb 22, 2023, 11:05 PM IST

ಕುಂದಾನಗರಿಯಲ್ಲಿ ಭರದ ಸಿದ್ಧತೆ

ಬೆಳಗಾವಿ: ನಗರದಲ್ಲಿ ನವೀಕರಣಗೊಂಡಿರುವ ಹೈಟೆಕ್ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಫೆ.27ರಂದು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಸಮಾವೇಶವನ್ನು ಬೆಳಗಾವಿಯ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಫೆ.27ರಂದು ಶಿವಮೊಗ್ಗದಿಂದ ಮಧ್ಯಾಹ್ನ 2 ಗಂಟೆಗೆ ಆಗಮಿಸುವ ಪ್ರಧಾನಿ 3.30ರ ವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ನವೀಕರಣಗೊಂಡ ಹೈಟೆಕ್ ರೈಲು ನಿಲ್ದಾಣ, ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣ ಬಿಡುಗಡೆಗೊಳಿಸಲಿದ್ದಾರೆ. ಮೋದಿ ಸಮಾವೇಶಕ್ಕೆ ಜಿಲ್ಲೆಯ 18 ವಿಧಾನಸಭೆ ಕ್ಷೇತ್ರಗಳಿಂದ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಬುಧವಾರ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಸ್ಥಳಿಯ ಶಾಸಕ ಅಭಯ ಪಾಟೀಲ ಹಾಗೂ ಎಂಎಲ್‌ಸಿ ಕೇಶವ ಪ್ರಸಾದ್ ಅವರು ಪೂರ್ವಭಾವಿಯಾಗಿ ಕಾರ್ಯಕ್ರಮದ ಸಿದ್ದತೆ ಪರಿಶೀಲಿಸಿದರು.

ರೋಡ್​ ಶೋ: ಶಾಸಕ ಅಭಯ್ ಪಾಟೀಲ್ ಮಾತನಾಡಿ, ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಲಾಗಿದೆ. ಬೃಹತ್ ರೋಡ್​ ಶೋ ಹಾಗೂ ವಿವಿಧ ರಾಜ್ಯದ ಸಾಂಸ್ಕೃತಿಕ ಕಾರ್ಯಕ್ರಮಗಳು, ನಾನಾ ರಾಜ್ಯದ ವೇಷಭೂಷಣ ಪ್ರದರ್ಶನ, ಬೃಹತ್ ಲೈವ್ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ.

ಈಗಾಗಲೇ ರೋಡ್​ ಶೋಗೆ ಮುರ್ನಾಲ್ಕು ಕಡೆ ಪರಿಶೀಲಿಸಿದ್ದು, ಎಸ್​ಪಿಜಿ ಯಾವುದಕ್ಕೆ ಅನುಮತಿ ನೀಡಲಿದೆ ಎನ್ನುವುದನ್ನೂ ಕಾದು ನೋಡಬೇಕು. ಬೆಳಗಾವಿ ಜಿಲ್ಲೆಯಲ್ಲಿ ಮೋದಿ ಅಭಿಮಾನಿಗಳು ಬಹಳಷ್ಟಿದ್ದಾರೆ. ಅಂದಾಜು ಐದಾರು ಲಕ್ಷ ಜನ ಭಾಗವಹಿಸಬಹುದು ಎಂದು ತಿಳಿಸಿದರು.

ಇದೆ ವೇಳೆ ಮೋದಿ ಕಾರ್ಯಕ್ರಮಗಳ ಉಸ್ತುವಾರಿ ಹಾಗೂ ಎಂಎಲ್ಸಿ ಕೇಶವ ಪ್ರಸಾದ್ ಮಾತನಾಡಿ,
ನರೇಂದ್ರ ಮೋದಿಯವರ ಅನುಯಾಯಿಗಳು ಬೆಳಗಾವಿಯಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಎಲ್ಲರೂ ಈ ಕಾರ್ಯಕ್ರಮಕ್ಕೆ ಬರಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ಥಳೀಯ ಕಾರ್ಯಕರ್ತರು ಉತ್ಸಾಹ ತೋರಿದ್ದಾರೆ. ಮೊದಲು ಸಮಾವೇಶ ಮಾಡಬೇಕೆಂದು ಅಂದುಕೊಂಡಿದ್ದೆವು. ಆದರೆ ರೋಡ್ ಶೋ ಗೆ ರಾಜ್ಯ ಸರ್ಕಾರ ಮತ್ತು ಪ್ರಧಾನಿ ಕಾರ್ಯಾಲಯದಿಂದ ಅನುಮತಿ ಸಿಕ್ಕಿದೆ. ಕರ್ನಾಟಕದಲ್ಲಿ ಹಿಂದೆಂದೂ ಆಗಿರದ ರೀತಿ ರೋಡ್ ಶೋ ಮಾಡಲು ಯೋಜನೆ ನಿರ್ಧರಿಸಲಾಗಿದೆ ಎಂದು ಹೇಳಿದರು. ರಾಜ್ಯದ ದೊಡ್ಡ ಜಿಲ್ಲೆ ಬೆಳಗಾವಿಯ 18 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಈಗಿನಿಂದಲೇ ಅಖಾಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇದನ್ನೂಓದಿ:ಬಿಜೆಪಿಯಿಂದ ಮಾತ್ರವೇ ಸಮಗ್ರ ಅಭಿವೃದ್ಧಿ: ವಿಜಯೇಂದ್ರ ಬಣ್ಣನೆ

Last Updated : Feb 22, 2023, 11:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.