ETV Bharat / state

ಕುಡಿವ ನೀರು, ಆರೋಗ್ಯ, ಶಿಕ್ಷಣ, ಕೃಷಿಗೆ ಆದ್ಯತೆ: ಸಚಿವ ಸತೀಶ್ ಜಾರಕಿಹೊಳಿ ಸೂಚನೆ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಕುರಿತು ಎಲ್ಲ ಇಲಾಖೆಯ ಅಧಿಕಾರಿಗಳ ಜೊತೆ ಸತೀಶ್​ ಜಾರಕಿಹೊಳಿ ಸಭೆ ನಡೆಸಿದರು.

ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
author img

By

Published : May 30, 2023, 8:36 PM IST

ಬೆಳಗಾವಿ : ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ನಾಳೆಯಿಂದಲೇ ಎಲ್ಲ ಸ್ಥಳೀಯ ಶಾಸಕರ ಗಮನಕ್ಕೆ ತಂದು ಅವರ ಜೊತೆಗೂಡಿ ರೈತರಿಗೆ ಬೀಜ - ಗೊಬ್ಬರ ವಿತರಣೆ ಕಾರ್ಯ ಆರಂಭಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.

ಜಿಲ್ಲೆಯ ಅಭಿವೃದ್ಧಿ ಕುರಿತು ಸುವರ್ಣ ವಿಧಾನಸೌಧದಲ್ಲಿ ಇಂದು ನಡೆದ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಸತೀಶ್ ಜಾರಕಿಹೊಳಿ ಮಾತನಾಡಿದರು. ಬೀಜ ಖರೀದಿಗೆ ರೈತರು ದೂರ ಅಲೆಯುವುದನ್ನು ತಪ್ಪಿಸಲು ಆದಷ್ಟು ಸಮೀಪದಲ್ಲಿ ಬೀಜ ಲಭಿಸುವಂತೆ ಕ್ರಮ ಕೈಗೊಳ್ಳಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇದ್ದರೆ ಕೂಡಲೇ ಬಿಡುಗಡೆ ಮಾಡಬೇಕು. ಆತ್ಮಹತ್ಯೆ ವರದಿಯಾದ ಕೂಡಲೇ ಮರಣೋತ್ತರ ಪರೀಕ್ಷೆ ನಡೆಸಿ ಪರಿಹಾರ ಬಿಡುಗಡೆಗೊಳಿಸಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದರು.

ವಿಪತ್ತು ಎದುರಾದ ಸಂದರ್ಭದಲ್ಲಿ ಯಾವುದೇ ಜಾನುವಾರುಗಳು ಮೃತಪಟ್ಟಾಗ ಅವುಗಳ ಮಾಲೀಕರಿಗೆ ಅಧಿಕಾರಿಗಳು ಸ್ವತಃ ಮನೆಗೆ ತೆರಳಿ ಪರಿಹಾರ ವಿತರಿಸಬೇಕು. ಪರಿಹಾರ ಪಡೆಯುವ ಪ್ರಕ್ರಿಯೆ ಗೊತ್ತಿಲ್ಲದಿರುವುದರಿಂದ ಅನೇಕ ಜನ ಪರಿಹಾರ ಪಡೆಯಲು ಮುಂದಾಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳೇ ಆಸಕ್ತಿ ವಹಿಸಿ ಪರಿಹಾರ ನೀಡಬೇಕು.

ರಾಜ್ಯದೆಲ್ಲೆಡೆ ಶಾಲೆಗಳು ಆರಂಭಗೊಳ್ಳುತ್ತಿದ್ದು, ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ಆರಂಭಿಸಬೇಕು. ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ತೆರವುಗೊಳಿಸಬೇಕು. ಹಾಗು ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಔಷಧಗಳ ದಾಸ್ತಾನು ಇರಬೇಕು. ಬೆಳಗಾವಿಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಒದಗಿಸಿ ಆದಷ್ಟು ಬೇಗನೇ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅತೀ ಹೆಚ್ಚು ಬಿಪಿಎಲ್ ಕಾರ್ಡ್​ ಇರುವ ಕಡೆಗಳಲ್ಲಿ ಪಡಿತರ ಅಂಗಡಿ ಆರಂಭಿಸಲು ಪರವಾನಗಿ ನೀಡಬೇಕು. ಹಾಗೆಯೇ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದಷ್ಟು ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬಗೊಳ್ಳಬಾರದು. ಅಧಿಕಾರಿಗಳು ನಿರಂತರ ನಿಗಾವಹಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಾರಕಿಹೊಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹಾಗೂ ಬೆಳಗಾವಿ ನಗರದ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ಪ್ರತ್ಯೇಕವಾಗಿ ಸಭೆ ನಡೆಸಿ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಹೊಸ ಸರಕಾರದ ಆಶಯದ ಪ್ರಕಾರ ಅಧಿಕಾರಿಗಳು ಕೆಲಸ ಮಾಡಬೇಕು. ಜನರಿಗೆ ಉತ್ತಮ ಆಡಳಿತ ನೀಡಬೇಕು ಎಂಬುದು ಸರಕಾರದ ಆದ್ಯತೆಯಾಗಿದೆ. ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಕ್ರಿಯಾಶೀಲ ಅಧಿಕಾರಿಗಳಿಗೆ ಕೆಲಸ ಮಾಡಲು ಪ್ರೋತ್ಸಾಹ ನೀಡಲಾಗುವುದು ಎಂದು ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.

ಇನ್ನು ಇದೇ ವೇಳೆ ಸಭೆಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಕೆಲವು ತಾಂತ್ರಿಕ ಕಾರಣಗಳು ಅಡ್ಡಿಯಾಗುತ್ತಿದ್ದು, ಇಂತಹ ಸಂದರ್ಭಗಳಲ್ಲಿ ತ್ವರಿತವಾಗಿ ಕ್ರಮವಾಗಬೇಕು. ಜನರು ಸರಕಾರದ ಮೇಲೆ ಇಟ್ಟಿರುವ ನಿರೀಕ್ಷೆ ನಾವು ಈಡೇರಿಸಬೇಕಿದೆ. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ ಅವರು ಮಾತನಾಡಿದ, ಪಿಕೆಪಿಎಸ್ ಮೂಲಕ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಸಿಡಿಲು ಬಡಿದು ರೈತರ ಬಣಿವೆ ಸುಟ್ಟಾಗ ನೈಸರ್ಗಿಕ ವಿಪತ್ತು ಮಾರ್ಗಸೂಚಿಯಡಿ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಲು ಸಚಿವರನ್ನು ಒತ್ತಾಯಿಸಿದರು. ಮತ್ತು ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಬೆಳಗಾವಿಯಿಂದ ಹಾವೇರಿ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ಜಂಟಿ ನಿರ್ದೇಶಕರ ಕಚೇರಿಯನ್ನು ಮತ್ತೆ ಬೆಳಗಾವಿಗೆ ಸ್ಥಳಾಂತರಿಸಬೇಕು. ನೇಮಕಗೊಂಡ ಅತಿಥಿ ಶಿಕ್ಷಕರನ್ನು ನಿಯೋಜಿಸುವಾಗ ಶಿಕ್ಷಕರ ಕೊರತೆ ಇರುವ ಗ್ರಾಮೀಣ ಪ್ರದೇಶಗಳ ಶಾಲೆಗಳಿಗೆ ಆದ್ಯತೆ ನೀಡಬೇಕು ಎಂದು ಶಾಸಕರು ಹೇಳಿದರು.

ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಒಟ್ಟಾರೆ 170 ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ತೋಟಗಾರಿಕೆ ಇಲಾಖೆಯ ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಮಾಡುವಾಗ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಯ ಮೂಲಕವೇ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಶಾಸಕರಾದ ಆಸಿಫ್(ರಾಜು) ಸೇಠ್, ಶಿಕ್ಷಕರ ಕೊರತೆ ಇರುವ ಕಡೆಗಳಲ್ಲಿ ಕೂಡಲೇ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಭೆಯಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಡಾ.ಸಾಬಣ್ಣ ತಳವಾರ ಉಪಸ್ಥಿತರಿದ್ದರು.

ನೂತನ ಸಚಿವರಿಗೆ ಜಿಲ್ಲಾಡಳಿತದಿಂದ ಸನ್ಮಾನ : ನೂತನ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿದರು. ಇದೇ ವೇಳೆ ಎಲ್ಲ ಶಾಸಕರನ್ನು ಕೂಡ ಜಿಲ್ಲಾಡಳಿತ ಪರವಾಗಿ ಶಾಲು ಹೊದಿಸಿ ಸಸಿಗಳನ್ನು ವಿತರಿಸಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಡಿಸಿಪಿ ಸ್ನೇಹಾ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : ಲೋಕಸಭೆ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ.. ಹೈಕಮಾಂಡ್ ಮೇಲೆ ವಿಶ್ವಾಸವಿದೆ: ವೀಣಾ ಕಾಶಪ್ಪನವರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.