ಬೆಳಗಾವಿ: ಕಿಲ್ಲರ್ ಕೊರೊನಾಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ ಹಲಸಗಿ (53) ನಿಧನರಾಗಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಇವರು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
![siddappa halasagi](https://etvbharatimages.akamaized.net/etvbharat/prod-images/kn-bgm-03-2-corona-professor-died-7201786_02092020181939_0209f_1599050979_477.jpg)
ಸುದೀರ್ಘ ಸೇವಾ ಅವಧಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಅವರು ಮಂಗಳೂರು ವಿವಿ ಮೂಲಕ ವೃತ್ತಿ ಜೀವನ ಆರಂಭಿಸಿದ್ದರು. ಹಲವು ವರ್ಷಗಳಿಂದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎನ್ಎಸ್ಎಸ್ ವಿಭಾಗ ಅಧ್ಯಕ್ಷರಾಗಿ ಹಾಘೂ ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಸಂಗೊಳ್ಳಿ ರಾಯಣ್ಣ ಸರ್ಕಾರಿ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ.