ETV Bharat / state

ಜಿಲ್ಲಾಧಿಕಾರಿ ಹಿರೇಮಠರಿಂದ ಬೆಳಗಾವಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನೆ - Belgaum City municipality

ಸದ್ಯ ಮಳೆಗಾಲವಾಗಿರುವ ಹಿನ್ನೆಲೆ ಕೈಗೊಳ್ಳಬೇಕಿರುವ ತುರ್ತು ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸುವಂತೆ ತಿಳಿಸಿದರು..

Progress Review of Belgaum city municipality
ಜಿಲ್ಲಾಧಿಕಾರಿ ಹಿರೇಮಠರಿಂದ ಬೆಳಗಾವಿ ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನೆ
author img

By

Published : Jul 20, 2020, 8:55 PM IST

ಬೆಳಗಾವಿ : ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಪಾಲಿಕೆಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ಪಾಲಿಕೆಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸದ್ಯ ಮಳೆಗಾಲವಾಗಿರುವ ಹಿನ್ನೆಲೆ ಕೈಗೊಳ್ಳಬೇಕಿರುವ ತುರ್ತು ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಜಲಮಂಡಳಿ ಮತ್ತು ನಗರ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕುರಿತು ಜಲಮಂಡಳಿ ಮತ್ತು ಕೆಯುಐಡಿಎಫ್​ಸಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ ಹೆಚ್ ಅವರು, ಪಾಲಿಕೆಯ ವಿವಿಧ ಕಾಮಗಾರಿಗಳ ಬಗ್ಗೆ ಸಭೆ ನಡೆಸುವ ಬಗ್ಗೆ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.